ಮದ್ಯ ಖರೀದಿ ವಯೋಮಿತಿ ಸಡಿಲಿಕೆ ಮಾಡದಿರಲು ಸರ್ಕಾರ ತೀರ್ಮಾನ

ಬೆಂಗಳೂರು,ಜ.18- ಸಾರ್ವಜನಿಕ ವಲಯ ಹಾಗೂ ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮದ್ಯ ಖರೀದಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸಡಿಲಿಕೆ ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ಅಬಕಾರಿ ಇಲಾಖೆಯು ಮದ್ಯ ಖರೀದಿಗೆ ನಿಗದಿ ಮಾಡಿದ್ದ ವಯೋಮಿತಿಯನ್ನು 21ರಿಂದ 18ವರೆಗೆ ಇಳಿಕೆ ಮಾಡಲು ನಿರ್ಧರಿಸಿ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಕೋರಲಾಗಿತ್ತು. ಆದರೆ ಈ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿ ಸರ್ಕಾರವೇ ಯುವಜನತೆಯನ್ನು ಮದ್ಯಪಾನಕ್ಕೆ ಪ್ರೋತ್ಸಾಹಿಸಲು ಕುಮ್ಮಕ್ಕು ನೀಡುತ್ತಿದೆ ಎಂದು ಚಿಂತಕರು, ಸಾಹಿತಿಗಳು, ವಿದ್ಯಾರ್ಥಿ ಸಂಘಟನೆಗಳು ಮತ್ತಿತರರು ವಿರೋಧ […]

ಶಿಕ್ಷಕರ ನೇಮಕಾತಿಗೆ ವಯೋಮಿತಿ ಸಡಿಲಿಕೆ : ಸಚಿವ ಸಂಪುಟ ಮಹತ್ವದ ತೀರ್ಮಾನ

ಬೆಂಗಳೂರು, ಆ.12- ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ನಿಗದಿಯಾಗಿದ್ದ ವಯೋಮಾನವನ್ನು ತಿದ್ದುಪಡಿ ಮಾಡುವ ಮಹತ್ವದ ತೀರ್ಮಾನವನ್ನು ಸಂಪುಟ ಸಭೆ ತೆಗೆದುಕೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದವರಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸಡಿಲಿಕೆ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ 15ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ […]

ಶಾಲಾ ಮಕ್ಕಳ ವಯೋಮಿತಿ ಏರಿಕೆ ರದ್ದತಿಗೆ ರುಪ್ಸಾ ಆಗ್ರಹ

ಬೆಂಗಳೂರು,ಜು.27- ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಬೇಕು ಎಂಬ ಸರ್ಕಾರಿ ಆದೇಶಕ್ಕೆ ಖಾಸಗೀ ಶಾಲೆಗಳ ಒಕ್ಕೂಟ ರುಪ್ಸಾ ವಿರೋಧ ವ್ಯಕ್ತಪಡಿಸಿದೆ. ಏಕಾಏಕಿ ಸರ್ಕಾರ ಇಂತಹ ತೀರ್ಮಾನ ಕೈಗೊಂಡಿರುವುದರಿಂದ ಸಾಕಷ್ಟು ಸಮಸ್ಯೆ ಉದ್ಭವಿಸಲಿದೆ. ಹಾಗಾಗಿ ಈ ಆದೇಶ ರದ್ದುಗೊಳಿಸಬೇಕು ಎಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯಿಸಿದ್ದಾರೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿರುವ ಇಂತಹ ಸಮಯದಲ್ಲಿ ಏಕಾಏಕಿ ವಯೋಮೀತಿ ಬದಲಾವಣೆ ಮಾಡಿದರೆ ಅದರಿಂದ ಸಾಕಷ್ಟು ಸಮಸ್ಯೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಈ ಹಿಂದೆ ಎಲ್‍ಕೆಜಿಗೆ […]