ಸೋಮವಾರದೊಳಗೆ ಬೂತ್ ಮಟ್ಟದ ಏಜೆಂಟರ ಪಟ್ಟಿ ನೀಡುವಂತೆ ಸೂಚನೆ

ಬೆಂಗಳೂರು,ಡಿ.24- ಬರುವ ಸೋಮವಾರದೊಳಗೆ ಎಲ್ಲ ರಾಜಕೀಯ ಪಕ್ಷಗಳು ನಗರದ 28 ವಿಧಾನಸಭಾ ಕ್ಷೇತ್ರಗಳ ಬೂತ್ ಮಟ್ಟದ ಏಜೆಂಟ್‍ಗಳ ಪಟ್ಟಿ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. ಬಿಬಿಎಂಪಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಿಗೆ ನಾವು ಈಗಾಗಲೇ ಬಿಎಲ್‍ಒಗಳನ್ನು ನಿಯೋಜನೆ ಮಾಡಿದ್ದೇವೆ. ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಈ ಕೂಡಲೆ […]

ವೋಟರ್ ಐಡಿ ಹಗರಣಕ್ಕೆ ಮಹತ್ವದ ಟ್ವಿಸ್ಟ್..?!

ಬೆಂಗಳೂರು, ನ.22- ಮತದಾರರ ಪಟ್ಟಿ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಹಲಸೂರು ಗೇಟ್ ಠಾಣೆ ಪೊಲೀಸರು ಎಲೆಕ್ಟ್ರಾನಿಕ್ ಡಿವೈಸ್‍ಗಳ ವಿಶ್ಲೇಷಣೆಗಳಿಂದ ಮತ್ತಷ್ಟು ಮಾಹಿತಿ ದೊರೆಯುವ ನಿರೀಕ್ಷೆಯಲ್ಲಿದ್ದು, ತನಿಖೆಗೆ ಮಹತ್ವದ ತಿರುವು ದೊರೆಯುವ ಸಾಧ್ಯತೆ ಇದೆ. ಅಕ್ರಮದ ಪ್ರಮುಖ ಆರೋಪಿ ಸ್ಥಾನದಲ್ಲಿರುವ ಚಿಲುಮೆ ಸಂಸ್ಥೆ ಸಾಫ್ಟ್‍ವೇರ್ ಇಂಜಿನಿಯರ್‍ಗಳಿಂದ ಸಮೀಕ್ಷಾ ಎಂಬ ಖಾಸಗಿ ಆಪ್ ಅಭಿವೃದ್ಧಿ ಪಡಿಸಿತು. ಅದರಲ್ಲಿ ಮತದಾರರ ಹೆಸರು, ಮೊಬೈಲ್ ಸಂಖ್ಯೆ, ಸಂಪರ್ಕ ವಿಳಾಸ, ಜಾತಿ, ಧರ್ಮ, ಉದ್ಯೋಗ ಸೇರಿದಂತೆ ಹಲವಾರು ಮಾಹಿತಿಗಳ ಕಾಲಂಗಳು ಅಡಕವಾಗಿದ್ದವು. ಚುನಾವಣಾ […]

ಬಿಜೆಪಿ ಸೇರುವಂತೆ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದ್ದ ಮೂವರ ಬಂಧನ

ಹೈದರಬಾದ್,ಅ.27- ತೆಲಂಗಾಣದ ಆಡಳಿತ ಪಕ್ಷದ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಕುದುರೆ ವ್ಯಾಪಾರ ನಡೆಸಲು ಯತ್ನಿಸುತ್ತಿದ್ದ ಆರೋಪದ ಮೇಲೆ ಮೂವರನ್ನು ಫಾರಂಹೌಸ್‍ನಿಂದ ಬಂಧಿಸಲಾಗಿದೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ. ಹರಿಯಾಣದ ಫರೀದಾಬಾದ್ನಲ್ಲಿ ಅರ್ಚಕರಾಗಿರುವ ಸತೀಶ್ ಶರ್ಮಾ (33), ತಿರುಪತಿಯಲ್ಲಿ ಮಠವೊಂದರ ಪೀಠಾಪತಿ ಡಿ.ಸಿಂಹಯಾಜಿ (45), ಸ್ವಾಮೀಜಿಯ ಭಕ್ತರಾದ ರೋಹಿತ್ ರೆಡ್ಡಿ ಹಾಗೂ ಸರೂರ್ನಗರದ ಉದ್ಯಮಿ ನಂದಕುಮಾರ್ (48) ಬಂಧಿತರು. ಶಾಸಕರಾದ ಪಿ.ರೋಹಿತ್ ರೆಡ್ಡಿ, ಭೀರಾಮ್ ಹರ್ಷವರ್ಧನ್ ರೆಡ್ಡಿ, ಪಿ.ರೇಗಾ ಕಾಂತ ರಾವ್, ಗುವ್ವಾಲಾ ಬಾಲರಾಜು ಅವರು ತಮಗೆ ಬಿಜೆಪಿ […]