ತಾರಕಕ್ಕೇರಿದ ಮೊಟ್ಟೆ v/s ಸಾವರ್ಕರ್ ವಿವಾದ

ಬೆಂಗಳೂರು,ಆ.20- ರಾಜ್ಯ ರಾಜಕಾರಣದಲ್ಲಿ ಇದೀಗ ಮೊಟ್ಟೆ V/S ವೀರ ಸಾರ್ವಕರ್ ಭಾವಚಿತ್ರ ಸುಟ್ಟು ಹಾಕಿದ ವಿವಾದ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ಸಂಘರ್ಷ ತಾರಕಕ್ಕೇರಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಎಸೆದ ಮೊಟ್ಟೆ ಪ್ರಕರಣ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಬಿಜೆಪಿ ವಿರುದ್ಧ ಪ್ರತಿಭಟನೆ ಮುಂದುವರೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಕೂಡ ಸ್ವಾತಂತ್ರ್ಯ ಹೋರಾಟಗಾರ ವೀರಸಾರ್ವಕರ್ ಭಾವಚಿತ್ರವನ್ನು ಸುಟ್ಟು ಹಾಕಿದ್ದಕ್ಕೆ ಆಕ್ರೋಶಗೊಂಡ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದ್ದಾರೆ. […]