ಅಘನಾಶಿನಿ ಉಳಿಸಲು ಹೆಚ್‍ಡಿಕೆ ಒತ್ತಾಯ

ಬೆಂಗಳೂರು, ಜ.11-ರಾಜ್ಯದಲ್ಲಿ ಅತಿ ವಿಶಾಲ ಹರಿವುಳ್ಳ ಅತ್ಯಂತ ಶುದ್ಧ ನದಿಯಾದ ಅಘನಾಶಿನಿಯನ್ನು ಉಳಿಸಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನದಿಗೆ ಧಕ್ಕೆಯಾಗುವ ರೀತಿಯಲ್ಲಿ ನಡೆಯುತ್ತಿರುವ ಚಿಪ್ಪಿಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ನಿಲ್ಲಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ನದಿ ಉಳಿವಿಗಾಗಿ ನಡೆಯುವ ಹೋರಾಟದಲ್ಲಿ ನಾನೂ ಅಘನಾಶಿನಿಯ ದನಿಯಾಗುತ್ತೇನೆ. ಉತ್ತರ ಕನ್ನಡದ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ. ಆ ನದಿ ಉಳಿಸಿಕೊಳ್ಳುವ ಬಗ್ಗೆ ಒಟ್ಟಾಗಿ ಹೋರಾಡಬೇಕಿದೆ. ಈ ಪ್ರಯತ್ನಕ್ಕೆ ನನ್ನ ಮತ್ತು […]