ಆಗುಂಬೆ ಘಾಟ್‍ನಲ್ಲಿ ಭೂ ಕುಸಿತದ ಪರಿಶೀಲಿಸಿದ ಕಿಮ್ಮನೆ

ಶೃಂಗೇರಿ, ಜು.13- ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರು ಆಗುಂಬೆ ಘಾಟ್‍ನ ಧರೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‍ಗಳಿಂದ ಮಾಹಿತಿ ಪಡೆದರು. ಭೂ ಕುಸಿದ ಪ್ರದೇಶದ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ತಮ್ಮ ಅವಯಲ್ಲಿಯೇ ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಮಾಡಿದ್ದಾಗಿ ತಿಳಿಸಿದರು. ಇದೇ ವೇಳೆ ಈ ಪ್ರದೇಶದಲ್ಲಿ ಭೂ ಕುಸಿತ ದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ […]

ಆಗುಂಬೆ ಘಾಟ್‌ನಲ್ಲಿ ಭೂಕುಸಿತ, ಸ್ಥಳ ಪರಿಶೀಲಿಸಿದ ಗೃಹಸಚಿವ ಜ್ಞಾನೇಂದ್ರ

ಬೆಂಗಳೂರು, ಜು.10- ಮಲೆನಾಡು ಹಾಗೂ ಕರಾವಳಿ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಮಾರ್ಗವಾದ ಆಗುಂಬೆ ಘಾಟ್‍ನಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿದೆ. ಈ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಭೇಟಿ ನೀಡಿ ಪರಿಶೀಲಿಸಿ ಸ್ಥಳದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ಪಡೆದು ಸಲಹೆ-ಸೂಚನೆ ನೀಡಿದರು. ತೀವ್ರ ಮಳೆಯಿಂದಾಗಿ ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟ್ ಮಾರ್ಗದಲ್ಲಿ ಭೂಕುಸಿತ ಉಂಟಾಗಿದೆ. ಘಾಟ್‍ನ ಹನ್ನೊಂದು ಹಾಗೂ ಹನ್ನೆರಡನೆ ತಿರುವಿನಲ್ಲಿ ಉಂಟಾದ […]