ಹರ್ಷ ಹಂತಕರನ್ನು ಬಂಧಿಸಿ ಶಿಕ್ಷೆ ಕೊಡಿಸುತ್ತೇವೆ, ಯಾರೂ ಭಾವೋದ್ವೇಗಕ್ಕೊಳಗಾಗಬೇಡಿ : ಸಿಎಂ

ಬೆಂಗಳೂರು,ಫೆ.21- ಶಿವಮೊಗ್ಗದಲ್ಲಿ ಯುವಕನ ಹತ್ಯೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ಪ್ರಾರಂಭವಾಗಿದ್ದು, ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಶಿಕ್ಷೆಯಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ನಮ್ಮ ಸಂಘಟನೆಯ ಹರ್ಷ ಎಂಬ ಕಾರ್ಯಕರ್ತನ ಕಗ್ಗೊಲೆಯಾಗಿದೆ. ಈಗಾಗಲೇ ತನಿಖೆ ಪ್ರಾರಂಭವಾಗಿದ್ದು, ಹಲವು ಸುಳಿವುಗಳು ಸಿಕ್ಕಿವೆ. ಶೀಘ್ರದಲ್ಲೇ ಆರೋಪಿಗಳ ಬಂಧನವಾಗಲಿದೆ. ಶಿವಮೊಗ್ಗದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು ಅಕಾರಿಗಳಿಗೆ ಸೂಚಿಸಲಾಗಿದೆ. ನಗರ ಹಾಗೂ ಸುತ್ತಮುತ್ತಲ ಜನರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. […]