ಮಂಕಿಪಾಕ್ಸ್ ತಡೆಗೆ ಕೇಂದ್ರದಿಂದ ರಾಜ್ಯಗಳಿಗೆ ಮಾರ್ಗಸೂಚಿ ರಿಲೀಸ್
ನವದೆಹಲಿ,ಜು.15-ಕೇರಳದಲ್ಲಿ ಮಂಕಿಪಾಕ್ಸ್ ಮೊದಲ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆಗಳಿಗೆ ಪತ್ರ ಬರೆದು ರೋಗನಿಯಂತ್ರಣ ಸಂಬಂಧ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಮಂಕಿಪಾಕ್ಸ್ ಕಾಯಿಲೆ ಹಲವು ದೇಶಗಳಲ್ಲಿ ಈಗಾಗಲೇ ವೇಗವಾಗಿ ಹರಡುತ್ತಿದ್ದು, ಭಾರತದ ಕೆಲವೆಡೆ ರೋಗಲಕ್ಷಣಗಳು ಕಂಡುಬಂದಿದ್ದು, ರಾಜ್ಯದ ಗಡಿಗಳಲ್ಲಿ ಆರೋಗ್ಯ ತಪಾಸಣೆ ಮಾಡಬೇಕು. ಕಾಯಿಲೆಯ ಲಕ್ಷಣಗಳು ಕಂಡುಬಂದಲ್ಲಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವುದು, ಸೋಂಕಿತರನ್ನು ಪ್ರತ್ಯೇಕವಾಗಿರಿಸುವುದು, ಸೋಂಕಿತರ ಸಂಪಕಿರ್ತರನ್ನು ಪತ್ತೆಹಚ್ಚಿ ರೋಗದ ಮಾದರಿಯನ್ನು […]