ಬೆಂಗಳೂರು ಸೇರಿ ರಾಜ್ಯದಾದ್ಯಂತ ಇನ್ನೂ 2 ದಿನ ಜಿಟಿಜಿಟಿ ಮಳೆ

ಬೆಂಗಳೂರು,ನ.24-ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜಿಟಿ ಜಿಟ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ನಿನ್ನೆ ಹಲವೆಡೆ ಮಧ್ಯಾಹ್ನದಿಂದಲೇ ತುಂತುರು ಮಳೆಯಾಗುತ್ತಿದೆ. ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಕೆಲವೆಡೆ ತುಂತುರು ಮಳೆ ಆರಂಭವಾಗಿತ್ತು. ನಿನ್ನೆ ಮಧ್ಯಾಹ್ನ ನಂತರ ಆಗಾಗ್ಗೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇಂದೂ ಕೂಡು ಮಳೆ ಮುಂದುವರೆದಿದ್ದು, ದೈನಂದಿನ […]