BIG NEWS : ನಿಮ್ಮ ಖುಷಿ ತುಂಬಾ ದಿನ ಇರಲ್ಲ : ADGP ಅಲೋಕ್ ಕುಮಾರ್‌ಗೆ ಜೀವ ಬೆದರಿಕೆ

ಬೆಂಗಳೂರು,ನ.24-ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ತಿರುವು ದೊರೆತಿದ್ದು, ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಘಟನೆಯ ಹೊಣೆ ಹೊತ್ತುಕೊಂಡಿದೆ. ಜತೆಗೆ ಎಡಿಜಿಪಿ ಅಲೋಕ್‍ಕುಮಾರ್‍ಗೂ ಬೆದರಿಕೆ ಹಾಕಲಾಗಿದೆ. ಅನಾಮದೇಯ ಮೂಲಗಳಿಂದ ಬಂದಿರುವ ಪತ್ರಿಕಾ ಹೇಳಿಕೆಯ ತಲೆಬರಹ ಅರೆಬಿಕ್ ಭಾಷೆಯಲ್ಲಿದೆ. ಮಜಿಲ್ ಅಲ್ ಮುಕ್ವಾವಹಮ್ಮದ್ ಅಲ್-ಇಸ್ಲಾಮಿಯಾ ಎಂದು ಬರೆಯಲಾಗಿದ್ದು, ಕೆಳಗೆ ಶಂಕಿತ ಉಗ್ರ ಶಾರಿಕ್‍ನ ಎರಡು ಫೋಟೋಗಳನ್ನು ಪ್ರಕಟಿಸಲಾಗಿದೆ. ಒಂದು ಫೋಟೋ ಆತ ಸೋಟಕ್ಕೂ ಮುನ್ನ ಸ್ಟೈಲೀಶ್‍ಆಗಿ ಫೋಸ್‍ಕೊಟ್ಟಿರುವುದು, ಮತ್ತೊಂದು ಸ್ಪೋಟದ ಬಳಿಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿದೆ. […]

ನಿಮ್ಮ ಆಧಾರ್ ಭಯೋತ್ಪಾದಕರ ಕೈಗೆ ಸಿಗದಿರಲಿ : ಜನರಿಗೆ ಅಲೋಕ್ ಕುಮಾರ್ ಕಿವಿಮಾತು

ಬೆಂಗಳೂರು, ನ.23- ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಿಂದ ನಾವು ಸಾಕಷ್ಟು ಪಾಠಗಳನ್ನು ಕಲಿಯಬೇಕಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಕುಮಾರ್ ತಿಳಿಸಿದ್ದು, ಅಮೂಲ್ಯ ದಾಖಲಾತಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ. ಟ್ವೀಟ್ ಮಾಡಿರುವ ಅವರು, ಆಧಾರ್ ಕಾರ್ಡ್ ಕಳೆದು ಹೋದಾಗ ತಕ್ಷಣವೇ ಎಚ್ಚರಿಕೆ ವಹಿಸಿ ಕ್ರಮ ಕೈಗೊಳ್ಳಿ.ಆಧಾರ್ ಕಾರ್ಡ್ನ ವೆಬ್ಸೈಟ್ ಯುಐಡಿಎಐ ನಲ್ಲಿ ಲಭ್ಯವಿರುವ ಲಾಕ್ ಮತ್ತು ಅನ್ಲಾಕ್ ಸೌಲಭ್ಯವನ್ನು ಬಳಸಿಕೊಂಡು ಆಧಾರ್ ಸಂಖ್ಯೆ ದುರುಪಯೋಗವಾಗುವುದನ್ನು […]

80 ಮಂದಿ ವಶಕ್ಕೆ, ವಿಚಾರಣೆ ತೀವ್ರ : ಲೋಕ್‍ಕುಮಾರ್

ಬೆಂಗಳೂರು,ಸೆ.27- ಇಂದು ಮುಂಜಾನೆ 3 ಗಂಟೆಯಿಂದಲೇ ರಾಜ್ಯಾದ್ಯಂತ ಪೊಲೀಸರು, ಪಿಎಫ್‍ಐ ಪದಾಧಿಕಾರಿಗಳ ಮತ್ತು ಮುಖಂಡರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‍ಕುಮಾರ್ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡುತ್ತಿದ್ದ ಅವರು, ಈತನಕ 80 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಜಿಲ್ಲೆಗಳಲ್ಲಿ ಎಸ್ಪಿಗಳು, ನಗರಗಳಲ್ಲಿ ಆಯುಕ್ತರುಗಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದರು.ಎನ್‍ಐಎ ಮತ್ತು ಇನ್ನಿತರ ಕೇಂದ್ರದ ತನಿಖಾ ಏಜೆನ್ಸಿಗಳಿಂದ ಕೆಲವು ಮಾಹಿತಿಗಳನ್ನು […]

ದುಷ್ಕರ್ಮಿಗಳ ಹಿನ್ನೆಲೆ ಕುರಿತು ತನಿಖೆ : ಅಲೋಕ್ ಕುಮಾರ್

ಶಿವಮೊಗ್ಗ, ಆ.16- ಯುವಕನಿಗೆ ಚಾಕು ಇರಿತ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಭಾಗಿಯಾಗಿದ್ದು, ಈ ಪೈಕಿ ಮೂವರನ್ನು ಬಂಧಿಸಲಾಗಿದೆ. ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನ್ ನಿರ್ದೇಶಕರಾದ ಅಲೋಕ್ ಕುಮಾರ್ ತಿಳಿಸಿದರು. ಜಿಲ್ಲೆಯಲ್ಲಿ ನಡೆದ ಘಟನೆ ಸಂಬಂಧ ರಾತ್ರಿಯೇ ಅಲೋಕ್ ಕುಮಾರ್ ಅವರು ಸ್ಥಳಕ್ಕೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರ ಸಾವರ್ಕರ್ ಅವರ ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿರುವುದು […]

ಪ್ರವೀಣ್ ನೆಟ್ಟಾರು ಕೊಲೆಯಲ್ಲಿ PFI-ADPI ಕೈವಾಡ ಶಂಕೆ : ಅಲೋಕ್ ಕುಮಾರ್

ಮಂಗಳೂರು,ಆ.11- ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ತಲಪಾಡಿ ಚೆಕ್‍ಪೋಸ್ಟ್ ಬಳಿ ಬಂಧಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಮೂವರು ಆರೋಪಿಗಳಿಗೆ ಆಶ್ರಯ ನೀಡಿದ ಮೂವರು ಮಹಿಳೆಯರು ಸೇರಿ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದರು. ಹಂತಕರು ಎಂದು ಗೊತ್ತಿದ್ದರೂ ಅವರಿಗೆ ಆಶ್ರಯ, ಹಣ, ಊಟ ಸಹಾಯ […]

ಎಡಿಜಿಪಿ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ

ಮಂಗಳೂರು, ಆ.4- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಸರಣಿ ಕೊಲೆಗಳು ನಡೆದ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ಕುಮಾರ್ ಅವರು ಇಂದು ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಉದ್ವಿಗ್ನ ಸ್ಥಿತಿಯಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಸಹಜ ಸ್ಥಿತಿಗೆ ಮರಳುತ್ತಿದ್ದು, ಪರಿಸ್ಥಿತಿ ಅವಲೋಕಿ ಸಲು ಇಂದು ಎಡಿಜಿಪಿ ಅವರು ಸಭೆ ನಡೆಸಿದರು. ಇತ್ತೀಚೆಗೆ ನಡೆದ ಘಟನೆಗಳ ಬಗ್ಗೆ ಅವಲೋಕನ ಮಾಡಲಾಯಿತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಮುಂದೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ […]

ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈವರೆಗೆ 15 ಜನ ವಶಕ್ಕೆ, ತನಿಖೆ ಚುರುಕು

ಬೆಂಗಳೂರು,ಜು.28- ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇದುವರೆಗೂ ಹದಿನೈದಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ಹೇಳಿದರು. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಳ್ಳಾರೆಯಲ್ಲಿರುವ ಎಡಿಜಿಪಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ಉಡುಪಿ ಪೊಲೀಸರ ಉಸ್ತುವಾರಿಯಲ್ಲಿ ಪ್ರವೀಣ್ ಹತ್ಯೆ ಸಂಬಂಧ ರಚಿಸಲಾಗಿರುವ ಆರು ಪೊಲೀಸ್ ತಂಡಗಳು ಈಗಾಗಲೇ ಕಾರ್ಯೋನ್ಮುಖವಾಗಿ ತನಿಖೆ ನಡೆಸುತ್ತಿವೆ ಎಂದರು. ಆರೋಪಿಗಳ ಪತ್ತೆಗೆ […]