ಶಿರಾದ ಅಂಬೇಡ್ಕರ್ ವಸತಿ ಶಾಲೆಯಲ್ಲಿ 25 ಮಕ್ಕಳಿಗೆ ಕೊರೊನಾ

ತುಮಕೂರು, ಜ.12- ನಗರದ ಹೊರವಲಯದಲ್ಲಿನ ಅಂಬೇಡ್ಕರ್ ವಸತಿ ಶಾಲೆಯ (ಪ್ರೀ ಮೆಟ್ರಿಕ್) 25 ಮಕ್ಕಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ವಸತಿ ಶಾಲೆಯ 10ನೆ ತರಗತಿ ವಿದ್ಯಾರ್ಥಿನಿಯೊಬ್ಬರಿಗೆ ಮೂರು ದಿನಗಳ ಹಿಂದೆ ಸಣ್ಣದಾಗಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಶಿರಾ ಸಾರ್ವಜನಿಕ ಆಸ್ಪತೆಯಲ್ಲಿ ಕೊರೊನಾ ರ್ಯಾಟ್ ಪರೀಕ್ಷೆ ನಡೆಸಲಾಗಿತ್ತು. ಆದರೆ, ಫಲಿತಾಂಶ ನೆಗೆಟಿವ್ ಬಂದಿದ್ದ ಕಾರಣ, ಆರ್‍ಟಿಪಿಸಿಆರ್ ಸ್ಯಾಂಪಲ್ ಸಂಗ್ರಹಿಸಿ, ಜ್ವರಕ್ಕೆ ಚಿಕಿತ್ಸೆ ನೀಡಿ ವಾಪಸ್ ವಸತಿ ಶಾಲೆಗೆ ಕಳುಹಿಸಲಾಗಿತ್ತು. ಆದರೆ, ವಿದ್ಯಾರ್ಥಿಯ […]