ಅಂಬ್ಯುಲೆನ್ಸ್ ಗಳ ಸುಗಮ ಸಂಚಾರಕ್ಕೆ ಹೊಸ ವ್ಯವಸ್ಥೆ

ಬೆಂಗಳೂರು,ಜ.16- ಸದಾ ವಾಹನ ದಟ್ಟಣೆಯಿಂದ ಗಿಜಿಗುಡುವ ರಾಜಧಾನಿಯಲ್ಲಿ ರೋಗಿಗಳ ಜೀವ ಉಳಿಸೋ ಅಂಬ್ಯುಲೆನ್ಸ್‍ಗಳು ಸಮಯಕ್ಕೆ ಸರಿಯಾಗಿ ಆಸ್ಪತ್ರೆ ತೆರಳಲು ಸಾಧ್ಯವಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿ ನಗರದ ರಸ್ತೆಗಳಲ್ಲಿ ಅಂಬ್ಯುಲೆನ್ಸ್ ಗಳು ಸರಾಗವಾಗಿ ಸಂಚರಿಸಲು ಅನುಕೂಲವಾಗುವಂತಹ ಹೊಸ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಸಿಕ್ಕಿ ಹಾಕಿಕೊಳ್ಳುವ ಅಂಬ್ಯುಲೆನ್ಸ್‍ಗಳಿಗೆ ಸರಾಗ ಸಂಚಾರ ವ್ಯವಸ್ಥೆ ಕಲ್ಪಿಸಲು ಪೊಲೀಸರು ಪರದಾಡಬೇಕಾಗಿತ್ತು. ಹೀಗಾಗಿ ತುರ್ತು ವಾಹನಗಳಿಗೆ ಟ್ರಾಫಿಕ್ ತಪ್ಪಿಸಲು ವಿಶೇಷ ವ್ಯವಸ್ಥೆ ಮಾಡಲು ಸಂಚಾರಿ ಪೊಲೀಸರು ತೀರ್ಮಾನಿಸಿದ್ದಾರೆ. ಅಂಬ್ಯುಲೆನ್ಸ್‍ಗಳ ಸರಾಗ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡುವಂತೆ […]