ಇಂದು ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತನಾಗ್

ಬೆಂಗಳೂರು,ಫೆ.22- ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ತಮ್ಮ ಎರಡನೇ ರಾಜಕೀಯ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ. ಮೂಲಗಳ ಪ್ರಕಾರ ಅನಂತನಾಗ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಾವುದಾದರೊಂದು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. […]