ಅಂಗನವಾಡಿ ಕಾರ್ಯಕರ್ತೆಯರ ಜೀವಕ್ಕೆ ಹಾನಿಯಾದರೆ ಸರ್ಕಾರವೇ ಹೊಣೆ

ಬೆಂಗಳೂರು,ಜ.20- ಮೈ ಕೊರೆಯುವ ಚಳಿಯಲ್ಲೂ ನಾವು ಹೋರಾಟ ಮುಂದುವರೆಸಿದ್ದೇವೆ ಒಂದು ವೇಳೆ ನಮ್ಮ ಜೀವಕ್ಕೆ ಏನಾದರೂ ತೊಂದರೆಯಾದರೆ ಅದಕ್ಕೆ ಸರ್ಕಾರವೇ ಕಾರಣರಾಗುತ್ತಾರೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ. ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮೂರನೆ ದಿನಕ್ಕೆ ಕಾಲಿಟ್ಟಿದೆ. ಮೈ ಕೊರೆಯುವ ಚಳಿಯಲ್ಲೂ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದಿಂದ ಯಾರೊಬ್ಬರೂ ಘಟನಾ ಸ್ಥಳಕ್ಕೆ ಆಗಮಿಸದಿರುವುದು ಕಾರ್ಯಕರ್ತೆಯರ ಆಕ್ರೋಶಕ್ಕೆ ಕಾರಣವಾಗಿದೆ. ನಾವು ನಮ್ಮ ಜೀವ ಹೋದರೂ ಪರ್ವಾಗಿಲ್ಲ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಒಂದು […]

ಮತ್ತೆ ಬೀದಿಗಿಳಿದ ಅಂಗನವಾಡಿ ಕಾರ್ಯಕರ್ತೆಯರು

ಬೆಂಗಳೂರು,ಜ.18- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತೆ ಬೀದಿಗಿಳಿದಿದ್ದಾರೆ. ಲಗೇಜ್ ಸಮೇತ ರಾಜ್ಯದ ನಾನಾ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‍ನಲ್ಲಿ ಜಮಾಯಿಸಿದ್ದು, ಈ ಬಾರಿ ಬೇಡಿಕೆ ಈಡೇರುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳೇನು..?ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಖಾಯಂ ಮಾಡಬೇಕು, ರಾಷ್ಟ್ರೀಯ ಶಿಕ್ಷಣ ಯೋಜನೆಯಾದ ಯನ್ನು ರಾಜ್ಯದಲ್ಲಿ ಜಾರಿ ಮಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ 31 ಸಾವಿರ ವೇತನ ನೀಡಿ ಶಾಲಾ ಶಿಕ್ಷಕರ […]