ಅನಿತಾಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ : ಅಶ್ವಥ್ ನಾರಾಯಣ

ಬೆಂಗಳೂರು,ಫೆ.22- ಕಾರ್ಯಕ್ರಮಕ್ಕೆ ಕರೆಯದೆ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂಬ ಶಾಸಕಿ ಅನಿತಾಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವರು, ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನೆ ವೇಳೆ ಅನಿತಾ ಕುಮಾರಸ್ವಾಮಿ ಅವರಿಗೆ ಅಪಮಾನಿಸಲಾಗಿದೆ ಎಂಬರ್ಥದ ಮಾತನ್ನು ಕೇಳಿ ಆಶ್ಚರ್ಯವಾಯಿತು. ಕಾರ್ಯಕ್ರಮ ಶಿಷ್ಟಾಚಾರದ ಪ್ರಕಾರವೇ ಜರುಗಿದರೂ ನಿಗದಿತ ಸಮಯಕ್ಕೆ ಹಾಜರಾಗದೇ, ಈ ರೀತಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ […]