ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್

ಬೆಂಗಳೂರು,ಜ.3- ಬಡತನ ರೇಖೆಗಿಂತ(ಬಿಪಿಎಲ್) ಕೆಳಗಿರುವ ಕುಟುಂಬದವರಿಗೆ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ನೀಡಲು ಸರ್ಕಾರ ಅಧಿಸೂಚನೆ ನಡೆಸಿದೆ. ಕಳೆದ ಬಜೆಟ್‍ನಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಜೊತೆಗೆ ಒಂದು ಕೆಜಿ ಹೆಚ್ಚುವರಿ ಅಕ್ಕಿಯನ್ನು ನೀಡುವುದಾಗಿ ಘೋಷಿಸಿದರು.ಅದರಂತೆ ಈ ತಿಂಗಳಿನಿಂದಲೇ ಅನ್ವಯವಾಗುವಂತೆ 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿಯಾಗಿ ವಿತರಣೆ ಮಾಡಲು ಸೂಚನೆ ನೀಡಲಾಗಿದೆ. ಈ ಸಂಬಂಧ ಆಹಾರ, […]
ಅನ್ನಭಾಗ್ಯಕ್ಕೆ ಕನ್ನ : ನಕಲಿ ನ್ಯಾಯಬೆಲೆ ಅಂಗಡಿಗಳಿಂದ ರೇಷನ್ ಎತ್ತುವಳಿ

ಬೆಂಗಳೂರು,ಡಿ.4-ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಧ್ಯೇಯದೊಂದಿಗೆ ಜಾರಿಯಾಗಿರುವ ಅನ್ನಭಾಗ್ಯ ಯೋಜನೆಗೆ ನಿರಂತರವಾಗಿ ಕನ್ನ ಹಾಕುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೂ ರಾಜ್ಯದಲ್ಲಿ ನಕಲಿ ನ್ಯಾಯಬೆಲೆ ಅಂಗಡಿಗಳು ಹಾಗೂ ಗ್ರಾಹಕರ ಕ್ರೆಡಿಟ್ ಸೊಸೈಟಿಗಳು (ಸಿಸಿಎಸ್) ಅಕ್ರಮವಾಗಿ ರೇಷನ್ ಎತ್ತುವಳಿ ಮಾಡುತ್ತಿವೆ. ರಾಜ್ಯದಲ್ಲಿ 1,15,82,636 ಬಿಪಿಎಲ್, 23,96,619 ಎಪಿಎಲ್ ಹಾಗೂ 10,90,818 ಅಂತ್ಯೋದಯ ಸೇರಿ ಒಟ್ಟು 1,50,70,073 ರೇಷನ್ ಕಾರ್ಡ್‍ಗಳಿಗೆ ಪ್ರತಿ ತಿಂಗಳು 20,204 ನ್ಯಾಯಬೆಲೆ ಅಂಗಡಿ ಸೇರಿ ಸಿಸಿಎಸ್‍ಗಳು ರೇಷನ್ ವಿತರಿಸುವ ಕಾರ್ಯದಲ್ಲಿ ತೊಡಗಿವೆ. ಆದರೆ ನ್ಯಾಯಬೆಲೆ ಅಂಗಡಿಗಳ ಮಾಲೀಕರ […]