ಕೂಡಲೇ ವಿಧಾನಸಭೆ ಚುನಾವಣೆ ಘೋಷಣೆ ಮಾಡಲು ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ,ಮಾ.3- ರಾಜ್ಯದಲ್ಲಿ ಭ್ರಷ್ಟಚಾರ ಮುಗಿಲು ಮುಟ್ಟಿದ್ದು, ಕೂಡಲೇ ಚುನಾವಣಾ ಆಯೋಗ ಕೂಡಲೇ ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಬೇಕು, ನೀತಿ ಸಂಹಿತಿ ಜಾರಿಯಾಗಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಚರ್ಚೆ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೂ ಈ ಬಗ್ಗೆ ದೂರು ನೀಡುತ್ತೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ಸರ್ಕಾರ ಆರು ತಿಂಗಳಿನಿಂದ ನೀಡಿರುವ ಎಲ್ಲಾ ಟೆಂಡರ್‍ಗಳನ್ನು ಮರು ಪರಿಶೀಲನೆ ಮಾಡುತ್ತೇವೆ ಎಂದು ಎಚ್ಚರಿಸಿದರು. ಮುಖ್ಯಮಂತ್ರಿ […]

ಹಿಮಾಚಲ ಸಿಎಂ ಆಯ್ಕೆ ಜವಾಬ್ದಾರಿ ಪ್ರಿಯಾಂಕ ಹೆಗಲಿಗೆ

ಸೀಮ್ಲಾ,ಡಿ.10- ತಮ್ಮ ರಾಜಕೀಯ ಜೀವನದ ಹಾದಿಯಲ್ಲಿ ಮೊದಲ ಬಾರಿಗೆ ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಶಸ್ಸಿನತ್ತ ಮುಖ ಮಾಡಿರುವ ಪ್ರಿಯಾಂಕ ಗಾಂಧಿ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲೂ ನಿರ್ಣಾಯಕರಾಗಿದ್ದಾರೆ. ನಿನ್ನೆ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ 40 ಮಂದಿ ಚುನಾಯಿತ ಪ್ರತಿನಿಧಿಗಳು ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂದು ಒಂದು ಸಾಲಿನ ನಿರ್ಣಯಕ್ಕೆ ಸರ್ವಸಮ್ಮತಿ ಸೂಚಿಸಿದ್ದಾರೆ. ಅಂತಿಮವಾಗಿ ಬೆಟ್ಟಗುಡ್ಡಗಳ ನಾಡು ಹಿಮಾಚಲಪ್ರದೇಶದ ಮುಖ್ಯಮಂತ್ರಿಯ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ರವಾನೆಯಾಗಿದೆ. ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪ್ರಿಯಾಂಕ ಗಾಂಧಿ […]