ಈ ಬಾರಿ ಮಾರ್ಚ್-ಏಪ್ರಿಲ್‌ನಲ್ಲೇ ನಡೆಯಲಿವೆ ವಾರ್ಷಿಕ ಪರೀಕ್ಷೆಗಳು

ಬೆಂಗಳೂರು,ಸೆ.26-ಕೋವಿಡ್ ಕಾರಣದಿಂದ ಕಳೆದ ವರ್ಷ 2021-22ರ ಜೂನ್-ಜುಲೈನಲ್ಲಿ ವಾರ್ಷಿಕ ಪರೀಕ್ಷೆಗಳು ನಡೆದಿತ್ತು. ಈ ವರ್ಷದಿಂದ ಈ ಹಿಂದೆ ಇದ್ದಂತೆ ಮಾರ್ಚ್-ಏಪ್ರಿಲ್ನಲ್ಲೇ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಸರ್ಕಾರ ಹೊರಡಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ, ಎಸ್ಎಸ್ಎಲ್ಸಿ ಪರೀಕ್ಷೆಗಳು ಹಿಂದಿನ ಮಾದರಿಗೆ ಮರಳಲಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸರಿಯಾಗಿ ಪಾಠಗಳು ನಡೆಯದಿದ್ದುದರಿಂದ ಕಳೆದ ಎರಡು ವರ್ಷ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗಿತ್ತು.ಆದರೆ ಈ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳು ಹಿಂದಿನ ಮಾದರಿಗೆ ಮರಳಬೇಕಾಗಿದೆ. ಪ್ರಬಂಧ-ಮಾದರಿಯ ಪ್ರಶ್ನೆಗಳಿಗೆ ವಿವರವಾದ ಉತ್ತರಗಳನ್ನು ಇನ್ನು ಮುಂದೆ […]