ನಮ್ಮ ಸರ್ಕಾರ ಬಂದರೆ ಮತಾಂತರ ನಿಷೇಧ ಕಾಯ್ದೆ ವಾಪಸ್ : ಪ್ರಿಯಾಂಕ ಖರ್ಗೆ

ಬೆಂಗಳೂರು,ಸೆ.16-ಮತಾಂತರ ನಿಷೇಧ ಕಾಯ್ದೆ ವೈಯಕ್ತಿಕ ಸ್ವಾತಂತ್ರ ಹರಣವಾಗಲಿದ್ದು, ಇಂತಹ ವಿವಾದಾತ್ಮಕ ಕಾಯ್ದೆಗಳನ್ನು ತಂದು ಗೊಂದಲ ಮೂಡಿಸುತ್ತಿದ್ದಾರೆ. ನಾವು ಶೀಘ್ರವೇ ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ಧರ್ಮ ಸೇರಲು ಅರ್ಜಿ ಹಾಕಿ ವೈಯಕ್ತಿಕ ಮಾಹಿತಿ ನೀಡಬೇಕು. ಆ ಮಾಹಿತಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸುತ್ತಾರೆ. ಇದರಿಂದ ವೈಯಕ್ತಿಕ ಮಾಹಿತಿ ಸೋರಿಕೆಯಾಗುವುದಿಲ್ಲವೇ? ಕಾನೂನು ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು. ಪ್ರಕರಣದಲ್ಲಿ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವುದಕ್ಕೆ ಅವಕಾಶವಿಲ್ಲ. […]