ರಾಷ್ಟ್ರವಿರೋಧಿ, ಮತಾಂಧತೆಯ ವಿರುದ್ಧ ಅರಿವು ಮೂಡಿಸಬೇಕು : ಸಿ.ಟಿ.ರವಿ

ಬೆಂಗಳೂರು,ಸೆ.28- ಐಸಿಸ್ ಮಾದರಿಯ ಉಗ್ರಗಾಮಿಗಳನ್ನು ಬೆಂಬಲಿಸಿದ, ದೇಶದ ಒಳಗೆ ಅಭದ್ರತೆ, ಅಂತರ್‍ಯುದ್ಧ, ದೇಶದ ದ್ರೋಹದ ಸಂಚು ರೂಪಿಸುತ್ತಿದ್ದ ಪಿಎಫ್‍ಐ ಹಾಗೂ ಅದರ ಸಂಘಟನೆಗಳನ್ನು ನಿಷೇಧ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸ್ವಾಗತಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರಕಾರ ಈ ಸಂಘಟನೆಗಳನ್ನು ಬ್ಯಾನ್ ಮಾಡಿದೆ, ಇಷ್ಟು ಸಾಕಾಗುವುದಿಲ್ಲ. ಸಮಾಜ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ. ವಿದ್ರೋಹಿ ಹಾಗು ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ […]