ಅಪಾರ್ಟ್ಮೆಂಟ್ ನ 10ನೇ ಮಹಡಿಯಿಂದ ಬಿದ್ದು ಸಾಫ್ಟ್‌ವೇರ್ ಉದ್ಯೋಗಿ ಸಾವು
ಬೆಂಗಳೂರು,ಆ.13-ಅಪಾರ್ಟ್ ವೊಂದರ ಹತ್ತನೇ ಮಹಡಿಯಿಂದ ಸಾಫ್ಟ್ವೇರ್ ಕಂಪನಿ ಉದ್ಯೋಗಿ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ತ್ರಿದೀಪ್(30) ಮೃತಪಟ್ಟ ಸಾಫ್ಟ್ವೇರ್ ಕಂಪನಿ ಉದ್ಯೋಗಿ.ಬೆಳ್ಳಂದೂರಿನ ಗ್ರೀನ್ ಶೋಭಾ ಡೈಸಿ ಅಪಾರ್ಟ್ಮೆಂಟ್ನಲ್ಲಿ ತ್ರಿದೀಪ್ ವಾಸವಾಗಿದ್ದರು. ಇಂದು ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ತ್ರಿದೀಪ್ 10ನೇ ಮಹಡಿಯಿದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಬೆಳ್ಳಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.