ಕಾಂಗ್ರೆಸ್ ಟಿಕೆಟ್‍ಗೆ ಅರ್ಜಿ ಸಲ್ಲಿಕೆಯ ಗಡುವು ವಿಸ್ತರಣೆ

ಬೆಂಗಳೂರು,ನ.15- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿ ಫಾರಂ ಪಡೆಯುವ ಸಲುವಾಗಿ 500ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ 10 ದಿನಗಳಿಂದ ಸುಮಾರು 1100ಕ್ಕೂ ಹೆಚ್ಚು ಮಂದಿ 5 ಸಾವಿರ ರೂ. ಶುಲ್ಕ ಪಾವತಿಸಿ ಅರ್ಜಿಗಳನ್ನು ಖರೀದಿಸಿದ್ದಾರೆ. ಅವರಲ್ಲಿ 500 ಮಂದಿ ಠೇವಣಿ ಬಾಂಡ್‍ನೊಂದಿಗೆ ಅರ್ಜಿ ಸಲ್ಲಿಸಿದ್ದಾರೆ. ಕೆಪಿಸಿಸಿಯ ಈ ಬಾರಿ ಸ್ಪಷ್ಟ ನಿಯಮಾವಳಿ ರಚನೆಯಾಗಿದ್ದು, ಬಿ ಫಾರಂ ಪಡೆಯಬೇಕಾದರೆ ಎಷ್ಟೇ ಪ್ರಭಾವಿ ನಾಯಕರಾಗಿದ್ದರು ಅರ್ಜಿ ಸಲ್ಲಿಕೆ ಕಡ್ಡಾಯ ಎಂಬ ಷರತ್ತು ವಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ […]