ಬಂಡವಾಳ ಹೂಡಿಕೆ ಯೋಜನೆಗಳ ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳ ನೇಮಕ

ಬೆಂಗಳೂರು,ನ.5- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದದ ಯೋಜನೆ ಗಳನ್ನು ಕಾಲ ಮಿತಿಯೊಳಗೆ ಅನುಷ್ಠಾನ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಗಳ ಅನುಷ್ಠಾನಕ್ಕಾಗಿ ಜಿಲ್ಲಾವಾರು ಸಮನ್ವಯ ಸಮಿತಿ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಇದರಿಂದ ಯೋಜನೆಗಳ ಅನುಷ್ಠಾನ ಕಾಲ ಮಿತಿಯೊಳಗೆ ಬರಲಿದೆ ಎಂದರು. ಇಲಾಖೆ ಹಂತದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳ ನಡುವೆ ಸಮನ್ವಯತೆ ಇದ್ದರೆ […]