ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆ ನಿರ್ಮಿಸಲು ತೀರ್ಮಾನ

ಬೆಂಗಳೂರು,ಮಾ.8-ರಾಜ್ಯದಲ್ಲಿ ಹೊಸ 100 ಪೊಲೀಸ್ ಠಾಣೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನಸಭೆಗೆ ಇಂದು ತಿಳಿಸಿದರು.  ಶಾಸಕ ಬಿ.ಕೆ.ಸಂಗಮೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ. ಶಿಥಿಲಾವಸ್ಥೆಯಲ್ಲಿರುವ ಠಾಣೆಗಳನ್ನು ಸಹ ಆಧುನೀಕರಣಗೊಳಿಸುವುದಾಗಿ ತಿಳಿಸಿದರು. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಒಟ್ಟು 6 ಪೊಲೀಸ್ ಠಾಣೆಗಳಲ್ಲಿವೆ. ಇದರಲ್ಲಿ 1 ಗ್ರಾಮಾಂತರ ಮತ್ತು 1 ಸಂಚಾರಿ ಪೊಲೀಸ್ ಠಾಣೆ ಮತ್ತು ಪೇಪರ್‍ಟೌನ್ ಠಾಣೆಗಳು ಶಿಥಿಲಾವಸ್ಥೆಯಲ್ಲಿವೆ. ಹೊಸದಾಗಿ […]