ದೇಶ ದುರ್ಬಲಗೊಳಿಸುವ ಶಕ್ತಿಯನ್ನು ಮಟ್ಟಹಾಕುತ್ತೇವೆ : ಜ್ಞಾನೇಂದ್ರ

ಬೆಂಗಳೂರು,ಫೆ.11- ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಖಚಿತ ಮಾಹಿತಿ ಮೇರೆಗೆ ರಾಜ್ಯ ಪೊಲೀಸರು ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ವಿಡಿಯೋದಲ್ಲಿ ಮಾತನಾಡಿರುವ ಅವರು, ರಾಜ್ಯದ ಆಂತರಿಕ ಭದ್ರತಾ ವಿಭಾಗ ಹಾಗೂ ರಾಷ್ಟ್ರೀಯ ತನಿಖಾ ದಳ ಸಹಭಾಗಿತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಸದ್ಯ ವಶದಲ್ಲಿರುವ ಶಂಕಿತ ಆರೀಫ್ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ […]

ಜೈಲುಗಳಲ್ಲಿ ಅಕ್ರಮ ತಡೆಯಲು ಕಠಿಣ ಕ್ರಮ : ಗೃಹ ಸಚಿವ ಜ್ಞಾನೇಂದ್ರ

ಬೆಂಗಳೂರು,ಜ.20- ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಮನಗರ, ತುಮಕೂರು, ಕಲಬುರಗಿ ಹಾಗೂ ಬೆಳಗಾವಿ ಕಾರಾಗೃಹಗಳಲ್ಲಿ ಕೆಲವು ಅಕ್ರಮ ಚಟುವಟಿಕೆಗಳ ಬಗ್ಗೆ ವರದಿಯಾಗಿದ್ದು, ಇದರ ಬಗ್ಗೆ ವಿಸ್ತೃತ ತನಿಖೆಗೆ ಆದೇಶ ನೀಡಿದ್ದು, ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್ ಪ್ರವೀಣ್ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹೇಳಿದರು. ಹಾಸನ ಜಿಲ್ಲಾ ಕಾರಾಗೃಹದ ಮೇಲೆ […]

ಪಾರದರ್ಶಕ ತನಿಖೆಗೆ ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವಹಿಸಲಾಗಿದೆ: ಆರಗ ಜ್ಞಾನೇಂದ್ರ

ಬೆಂಗಳೂರು, ಜ.17- ವಿವಿಧ ಆರೋಪಗಳಿರುವ ಸ್ಯಾಂಟ್ರೋ ರವಿ ಪ್ರಕರಣದ ಬಗ್ಗೆ ಯಾವುದೇ ಅನುಮಾನಗಳು ಬಾರದಂತೆ ಮತ್ತು ಮತ್ತಷ್ಟು ಪಾರದರ್ಶಕವಾಗಿ ತನಿಖೆ ನಡೆಸಲು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಈ ಸಂಬಂಧ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮೈಸೂರು ಪೊಲೀಸರು ಈ ಪ್ರಕರಣದ ತನಿಖೆ ಮಾಡುತ್ತಿದ್ದರು. ತನಿಖೆ ಮತ್ತಷ್ಟು ಪಾರದರ್ಶಕವಾಗಿ ನಡೆಯಲು ಮತ್ತು ಯಾವುದೇ ಅನುಮಾನ ಈ ಪ್ರಕರಣದಲ್ಲಿ ಬಾರದಂತೆ ತನಿಖೆ ಮಾಡಲು ಸಿಐಡಿಗೆ ವಹಿಸಲಾಗಿದೆ. ಪಿಎಸ್‍ಐ ಪ್ರಕರಣ ತನಿಖೆ ಮಾಡಿದ ತಂಡವೇ […]

ಸ್ಯಾಂಟ್ರೋ ರವಿ ಆಮಿಷಕ್ಕೆ ಒಳಗಾಗುವಂತ ಪ್ರಸಂಗ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ

ಬೆಂಗಳೂರು, ಜ.16- ಸ್ವಚ್ಚ ರಾಜಕಾರಣ ದಲ್ಲಿ ನಾನು ಬದ್ಧತೆ ಹೊಂದಿದ್ದು, ಸಮಾಜದ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ ಬದುಕಲು ಇಚ್ಛಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಯಾಂಟ್ರೊ ರವಿಯಂಥ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂಥ ಪ್ರಸಂಗ ಬಂದರೆ ಸಾವನ್ನು ಬಯಸುತ್ತೇನೆ ಎಂದು ಹೇಳಿದ್ದಾರೆ. ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ […]

ಸ್ಯಾಂಟ್ರೋ ರವಿ ಜೊತೆ ಪೊಲೀಸರು ಶಾಮೀಲಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ಜ್ಞಾನೇಂದ್ರ ಎಚ್ಚರಿಕೆ

ಬೆಂಗಳೂರು,ಜ.11- ರೌಡಿಶೀಟರ್ ಹಿನ್ನಲೆಯ ಸ್ಯಾಂಟ್ರೊ ರವಿ ಜೊತೆ ಪೊಲೀಸ್ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವುದು ತನಿಖೆಯಲ್ಲಿ ಕಂಡುಬಂದರೆ ಅಂಥವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೊ ರವಿ ಜೊತೆ ನಮ್ಮ ಇಲಾಖೆಯ ಯಾವುದೇ ಅಧಿಕಾರಿಗಳು ಕಾನೂನು ಬಾಹಿರವಾಗಿ ಅಪರಾಧ ಚಟುವಟಿಕೆಗಳನ್ನು ನಡೆಸಲು ಕುಮ್ಮಕ್ಕು ಕೊಟ್ಟಿದ್ದರೆ ಕಂಡಿತವಾಗಿಯೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಯಾರನ್ನೂ ಕೂಡ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಉತ್ತರಿಸಿದರು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈಗಾಗಲೇ […]

ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ಬದ್ಧನಾಗಿರುವ ನನ್ನ ವಿರುದ್ಧ ಅಪಪ್ರಚಾರ: ಅರಗ ಕಿಡಿ

ಬೆಂಗಳೂರು, ಡಿ.31- ಸದಾ ಅಡಕೆ ಬೆಳೆ ಗಾರರ ಹಿತಾಸಕ್ತಿ ಕಾಳಜಿ ಇರುವ, ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನನ್ನ ಬಗ್ಗೆ ಆರೋಪ ಮಾಡಲು ಬೇರೆ ಏನೂ ಇಲ್ಲದ ಕಾರಣ ಮಲೆನಾಡು ಹಾಗೂ ಕರಾವಳಿ ಪ್ರದೇಶದ ಅಡಕೆ ಬೆಳೆಗಾರರ ಪರವಾಗಿ, ರೈತರ ಹಿತ ರಕ್ಷಣೆ ಬಗ್ಗೆ ಸದನದಲ್ಲಿ ಮಾತನಾಡಿದ್ದನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು. […]

ಹಿಂಡಲಗಾ ಜೈಲಿಗೆ ಗೃಹ ಸಚಿವ ಜ್ಞಾನೇಂದ್ರ ದಿಡೀರ್ ಭೇಟಿ

ಬೆಳಗಾವಿ,ಡಿ.29-ಜೈಲಿನೊಳಗೆ, ಮೊಬೈಲ್, ಗಾಂಜಾ ಮೊದಲಾದ ಮಾದಕ ವಸ್ತುಗಳ ಸರಬರಾಜು ಇತರೆ ಅಕ್ರಮಗಳನ್ನು ನಿಯಂತ್ರಿಸಲು ಜೈಲಿನ ಅಧಿಕಾರಿಗಳು, ಸಿಬ್ಬಂದಿ ಕೈಗೊಂಡಿರುವ ಕ್ರಮಗಳ ಕುರಿತು ಖುದ್ದು ಪರಿಶೀಲನೆಗಾಗಿ ಐತಿಹಾಸಿಕ ಹಿಂಡಲಗಾ ಜೈಲಿಗೆಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಬೆಳಿಗ್ಗೆ ಅನಿರೀಕ್ಷಿತ ಭೇಟಿ ಕೊಟ್ಟಿದ್ದರು. ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿಯೇ ವಾಸ್ತವ್ಯವಿರುವ ಗೃಹ ಸಚಿವರು ಹಿಂಡಲಗಾ ಕಾರಾಗೃಹಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಮಹಾರಾಷ್ಟ್ರದಲ್ಲೂ ಲವ್ ಜಿಹಾದ್ ವಿರುದ್ಧ ಕಾನೂನಾಸ್ತ್ರ ಜಾರಿ..? ಜೈಲಿನೊಳಗೆ, ಮೊಬೈಲ್, ಗಾಂಜಾ […]

ಸೈಬರ್ ಅಪರಾಧ ನಿರ್ಲಕ್ಷಿಸುವ ಪೊಲೀಸರ ವಿರುದ್ಧ ಕಠಿಣ ಕ್ರಮ

ಬೆಳಗಾವಿ, ಡಿ.26- ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ರೀಲ್ಸ್, ಬ್ಯಾಂಕ್ ಅಪರಾಧ ಸೇರಿದಂತೆ ಇತರೆ ಸೈಬರ್ ಅಪರಾಧ ಚಟುವಟಿಕೆಗಳ ಬಗ್ಗೆ ನಿರ್ಲಕ್ಷ್ಯವಹಿಸುವ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಶ್ಲೀಲ ವಿಡಿಯೋ ವೈರಲ್ ಮಾಡುವುದು ಸಾಮಾಜಿಕ ಪಿಡುಗು ಇದ್ದಂತೆ. ಸೈಬರ್ ಅಪರಾಧ ನಿಲ್ಲಿಸಲು ಪೊಲೀಸ್, ಕಾಯ್ದೆಗಿಂತ ಸಾರ್ವಜನಿಕರೇ ನೇರವಾಗಿ ವಿರೋಧಿಸಲಿ. ಅಲ್ಲದೆ, ಒಂದು ವೇಳೆ […]

ರಾಜ್ಯದಲ್ಲಿ ಅಂತಾರಾಷ್ಟ್ರೀಯ ಮಾದರಿ ವಿಧಿವಿಜ್ಞಾನ ವಿವಿ ಸ್ಥಾಪನೆ

ಚಿತ್ರದುರ್ಗ,ಡಿ.14- ರಾಜ್ಯದಲ್ಲಿ ಅಂತಾರಾಷ್ಟ್ರೀಯ ಮಾದರಿ ವಿಧಿವಿಜ್ಞಾನ ವಿವಿ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಚಿತ್ರದುರ್ಗ ಜಿಲ್ಲೆ ಐಮಂಗಲ ಪೊಲೀಸ್ ತರಬೇತಿ ಶಾಲೆ 7ನೇ ತಂಡದ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ನಿರ್ಗಮ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಅಂತಾರಾಷ್ಟ್ರೀಯ ಮಾದರಿಯ ವಿಧಿವಿಜ್ಞಾನ […]

ಲವ್ ಜಿಹಾದ್ ಪ್ರಕರಣಗಳ ತನಿಖೆಗೆ ವಿಶೇಷ ಶಾಖೆ ಸ್ಥಾಪಿಸುವಂತೆ ಆಗ್ರಹ

ಬೆಂಗಳೂರು,ಡಿ.11- ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಘಟನೆಗಳ ಹಿನ್ನೆಲೆ ಲವ್ ಜಿಹಾದ್ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಪೊಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ದುರ್ಗಾ ವಾಹಿನಿಯಿಂದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಜನಜಗೃತಿ ಸಮಿತಿಯ ಮೋಹನ್ ಗೌಡ, ದೆಹಲಿಯ ಜಿಹಾದಿ ಅಪ್ತಾಭ್ ಹಿಂದೂ ಯುವತಿ ಶ್ರದ್ಧಾ ಬರ್ಬರವಾಗಿ ಹತ್ಯೆ ಮಾಡಿದಂತೆ ರಾಜ್ಯದಲ್ಲೂ ಹೆಚ್ಚು ಲವ್ ಜಿಹಾದ್ […]