ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ಹೇಗ್,ಮಾ.18-ಉಕ್ರೇನಿಯನ್ ಮಕ್ಕಳನ್ನು ಕಾನೂನುಬಾಹಿರವಾಗಿ ಗಡಿಪಾರು ಮಾಡಿದ ಯುದ್ಧ ಅಪರಾಧದ ಆರೋಪದ ಮೇಲೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅಂತರರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಬಂಧನ ವಾರಂಟ್ ಪ್ರಕಟಿಸಿದೆ. ಇದೇ ಆರೋಪದ ಮೇಲೆ ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ವಿರುದ್ಧವೂ ವಾರೆಂಟ್ ಹೊರಡಿಸಿರುವುದಾಗಿ ಹೇಗ್ ಮೂಲದ ಕೋರ್ಟ್ ಹೇಳಿದೆ. ಕೋರ್ಟ್ ಆದೇಶವನ್ನು ಉಕ್ರೇನ್ ಸ್ವಾಗತಿಸಿದೆ. ಇದೊಂದು ಐತಿಹಾಸಿಕ ನಿರ್ಧಾರ ಎಂದು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಪ್ರಶಂಸಿದ್ದಾರೆ. ಚೀನಾದ ನಾಯಕ ಕ್ಸಿ ಜಿನ್‍ಪಿಂಗ್‍ನಿಂದ ಮಾಸ್ಕೋ […]