ಅರುಂಧತಿ ಸಿನಿಮಾ ಹುಚ್ಚು : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ತುಮಕೂರು, ಆ.11- ತೆಲುಗಿನ ಅರುಂಧತಿ ಸಿನಿಮಾದ ಗೀಳು ಅಂಟಿಸಿಕೊಂಡ ಯುವಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ಮಧುಗಿರಿ ತಾಲೂಕಿನ ಗಿಡ್ಡನಪಾಳ್ಯದಲ್ಲಿ ನಡೆದಿದೆ. ಗಿಡ್ಡನಪಾಳ್ಯದ ರೇಣುಕಯ್ಯ ಬೆಂಕಿ ಹಚ್ಚಿಕೊಂಡ ಯುವಕ. ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದ ಈತನನ್ನು ತುಮಕೂರಿನ ಕಾಲೇಜಿಗೆ ಸೇರಿಸಲಾಗಿತ್ತು. ನಂತರ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಸಿನಿಮಾ ಗೀಳು ಅಂಟಿಸಿಕೊಂಡಿದ್ದ ಎನ್ನಲಾಗಿದೆ. ತೆಲುಗಿನಲ್ಲಿ ತೆರೆಕಂಡಿದ್ದ ಅರುಂಧತಿ ಸಿನಿಮಾದಿಂದ ಪ್ರಭಾವಿತಗೊಂಡಿದ್ದ ಈತ ಪದೇ ಪದೇ ಈ ಸಿನಿಮಾ ವೀಕ್ಷಣೆ ಮಾಡುತ್ತಿದ್ದ ಎನ್ನಲಾಗಿದ್ದು, ವಿದ್ಯಾಭ್ಯಾಸ ಬಿಟ್ಟು ಮನೆಗೂ ಬರದೆ ತುಮಕೂರಿನಲ್ಲಿ […]