ಅರವಿಂದ್ ಕೇಜ್ರಿವಾಲ್ ಭವಿಷ್ಯದ ಪ್ರಧಾನಿ..?
ನವದೆಹಲಿ, ಮಾ.10- ಭವಿಷ್ಯದಲ್ಲಿ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ಪ್ರಮುಖ ಸವಾಲಾಗಲಿದ್ದು, ಅವರು ಪ್ರಧಾನಿಯಾಗುತ್ತಾರೆ ಎಂಬ ವಿಶ್ವಾಸವನ್ನು ಎಎಪಿ ಮುಖಂಡ ರಾಘವ್ ಚಡ್ಡಾ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಚುನಾವಣಾ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿ ಕಡಿಮೆ ಅವಧಿಯಲ್ಲಿ ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಗಿದೆ. ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಕಾಂಗ್ರೆಸ್ ಮುಖಂಡರ ನಡುವೆ ಉಂಟಾಗಿದ್ದ ರಾಜಕೀಯ ಕೆಸರೆರಚಾಟದ ಲಾಭ ಪಡೆಯುವಲ್ಲಿ ನಮ್ಮ ಪಕ್ಷ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿರುವ […]