ಮಾ.7ರಿಂದ ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ..?

ಬೆಂಗಳೂರು,ಮಾ.3-ಸರ್ಕಾರ ಕೊಟ್ಟ ಮಾತು ತಪ್ಪಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮಾ.7 ರಿಂದ ಅರ್ನಿಷ್ಟಾವ ಅಹೋರಾತ್ರಿ ಧರಣಿ ನಡೆಸ ಲಾಗುವುದು ಎಂದು ರಾಜ್ಯ ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯ ಫೆಡರೇಷನ್ ಎಚ್ಚರಿಸಿದೆ. ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬಜೆಟ್‍ನಲ್ಲಿ ನಮ್ಮ ಬೇಡಿಕೆ ಈಡೇರಿಸ ಬೇಕು ಇಲ್ಲದಿದ್ದರೆ 7 ರಿಂದ ಅಹೋರಾತ್ರಿ ಧರಣೆ ನಡೆಸಲಾಗುವುದು ಎಂದು ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಜಯಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್‍ಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ. […]