ಐಫೋನ್ ತಯಾರಿಕಾ ಘಟಕ ಸ್ಥಾಪನೆಗೆ ಸ್ಥಳ ವೀಕ್ಷಣೆ

ಬೆಂಗಳೂರು, ಮಾ.3-ಜಗತ್ತಿನ ಮುಂಚೂಣಿ ಕಂಪನಿಗಳಲ್ಲಿ ಒಂದಾಗಿರುವ ತೈವಾನ್ ಮೂಲದ ಫಾಕ್ಸ್ಕಾನ್ ಸಮೂಹದ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ನೇತೃತ್ವದ ಉನ್ನತ ಮಟ್ಟದ ನಿಯೋಗವು ರಾಜ್ಯದಲ್ಲಿ ಆಪಲ್ ಫೋನ್ ತಯಾರಿಕಾ ಘಟಕ ಸ್ಥಾಪಿಸುವ ಸಂಬಂಧ ಸ್ಥಳ ವೀಕ್ಷಣೆಗೆ ಆಗಮಿಸಿದ್ದು, ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಇಂದು ಮೊದಲ ಸುತ್ತಿನ ಚರ್ಚೆ ನಡೆಸಿತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಂಪನಿಯ 17 ಉನ್ನತಾಧಿಕಾರಿಗಳನ್ನು ಒಳಗೊಂಡ ನಿಯೋಗವನ್ನು ಬರಮಾಡಿಕೊಂಡ ಸಚಿವರು, ರಾಜ್ಯದಲ್ಲಿ ಐಟಿ, ತಾಂತ್ರಿಕ ಶಿಕ್ಷಣ, […]