ಶೀಘ್ರದಲ್ಲೇ 1050 ಉಪನ್ಯಾಸಕರ ನೇಮಕಾತಿ

ಬೆಂಗಳೂರು, ಫೆ. 16- `ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1050 ಸಹಾಯಕ ಪ್ರಾಧ್ಯಾಪಕರ ಹುದ್ದೆ ಆಯ್ಕೆಗೆ ಲಿಖಿತ ಪರೀಕ್ಷೆ ಮುಗಿದಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಾ.ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, `ರಾಜ್ಯದಲ್ಲಿ ಒಟ್ಟು 6500 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 5000 ಹುದ್ದೆಗಳು ಭರ್ತಿಯಾಗಿವೆ. ಹೊಸದಾಗಿ 1050 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು […]

ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ವಿಷಾದ

ಬೆಂಗಳೂರು, ಫೆ.16- ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇನೆ ವಿನಃ ವೈಯಕ್ತಿಕವಾಗಿ ಅಲ್ಲ. ಹೀಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನನ್ನ ಹೇಳಿಕೆಯಿಂದ ವೈಯಕ್ತಿಕವಾಗಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಉನ್ನತ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವದಲ್ಲಿ ಇದ್ದೇವೆ. ಯುದ್ಧದ ಕಾಲದಲ್ಲಿ ಇಲ್ಲ. ಪ್ರಜಾಪ್ರಭುತ್ವದಲ್ಲಿ ಗೆಲ್ಲಬೇಕಿದೆ. ಆ ವಿಚಾರವಾಗಿ ಹೇಳಿದ್ದೇನೆ ಹೊರತು ಬೇರೆ ರೀತಿ ಅಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇನೆ ವಿನಃ ನನ್ನ ಮಾತಿನ ಉದ್ದೇಶ ವೈಯಕ್ತಿಕವಾಗಿ ಅಲ್ಲ. ಮಂಡ್ಯದಲ್ಲಿ ಕಸಬಾ […]