ಭಾರತ- ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ

ದುಬೈ, ಆ. 28- ಕ್ರಿಕೆಟ್ ಲೋಕದಲ್ಲಿ ಪ್ರತಿಷ್ಠಿತ ಟೂರ್ನಿಯಾಗಿರುವ ಏಷ್ಯಾ ಕಪ್‍ನ ರಂಗು ಈಗಾಗಲೇ ರಂಗೇರಿದ್ದರೂ, ಅಸಲಿ ಆಟವು ಇಂದಿನಿಂದ ಆರಂಭಗೊಳ್ಳಲಿದೆ. ಇಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದರೆ, ಮತ್ತೊಂದೆಡೆ ಸ್ಟಾರ್ ಆಟಗಾರರು ಮುಂಬರುವ ಚುಟುಕು ವಿಶ್ವಕಪ್‍ನ ಹಿನ್ನೆಲೆಯಲ್ಲಿ ತಮ್ಮ ಸಾಮಥ್ರ್ಯವನ್ನು ತೋರ್ಪಡಿಸುವ ಅಗ್ನಿಪರೀಕ್ಷೆಗೆ ಗುರಿಯಾಗಿದ್ದಾರೆ. ಚುಟುಕು ಕ್ರಿಕೆಟ್ ಮಾದರಿಯಲ್ಲಿ ಟೀಂ ಇಂಡಿಯಾ ನಂಬರ್ 1 ಸ್ಥಾನದಲ್ಲಿದೆ, ಇದಕ್ಕೆ ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾರಂತಹ ಯುವ ಆಟಗಾರರ ಬ್ಯಾಟಿಂಗ್ […]