ಹಾಸನ ಜೆಡಿಎಸ್ ಟಿಕೆಟ್‍ ಕಿತ್ತಾಟಕ್ಕೆ ನಾಳೆ ತೆರೆ ಸಾಧ್ಯತೆ..?

ಹಾಸನ, ಫೆ.25- ತೀವ್ರ ಕುತೂಹಲ ಕೆರಳಿಸಿರುವ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಗೊಂದಲಕ್ಕೆ ನಾಳೆ ತೆರೆ ಬೀಳುವ ಸಾಧ್ಯತೆಗಳಿವೆ. ನಾಳೆ ಹಾಸನ ಕ್ಷೇತ್ರದ ಮುಖಂಡರ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಹೀಗಾಗಿ ನಾಳಿನ ಸಭೆಯತ್ತ ಎಲ್ಲರ ಚಿತ್ತವಿದೆ. ಹಾಸನ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ಶಕ್ತಿಯಿರೊ ಕಾರ್ಯಕರ್ತರ ಪಡೆಯೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಅಭ್ಯರ್ಥಿ ಆಯ್ಕೆ ಸಂಬಂಧ ಅಭಿಪ್ರಾಯ ಕೇಳಲು ಪ್ರಮುಖ ಕಾರ್ಯಕರ್ತರ ಸಭೆಯನ್ನು […]

ಹಾಸನದಲ್ಲಿ ಸೈಲೆಂಟಾದ ಭವಾನಿ ರೇವಣ್ಣ..!

ಹಾಸನ,ಫೆ.8- ಜೆಡಿಎಸ್ ಟಿಕೆಟ್ ಗೊಂದಲದ ನಡುವೆ ಹಾಸನ ವಿಧಾನಸಭಾ ಕ್ಷೇತ್ರದಾದ್ಯಂತ ಎಚ್.ಪಿ.ಸ್ವರೂಪ ಪ್ರಕಾಶ್ ಬಿರುಸಿನ ಸಂಚಾರ ನಡೆಸುತ್ತಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಪ್ರಮುಖ ಆಕಾಂಕ್ಷಿಯಾಗಿರುವ ಸ್ವರೂಪ ಅವರು ನಗರ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದು ಮತದಾರರ ಮನವೊಲಿಕೆಗೆ ಮುಂದಾಗಿದ್ದಾರೆ. ಹಾಸನ ನಗರ ವ್ಯಾಪ್ತಿಯ ಗುಂಡೇಗೌಡನ ಕೊಪ್ಪಲು, ಭಟ್ಲರ್ ಕೊಪ್ಪಲಿನಲ್ಲಿ ಮತದಾರರ ಬೇಟೆಗೆ ಮುಂದಾಗಿರುವ ಸ್ವರೂಪ ಜೆಡಿಎಸ್ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ. ಸ್ವರೂಪ್ ಪ್ರಕಾಶ್ ಅವರು ಹಾಸನ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ನಡೆಯುವ ಪ್ರತಿಯೊಂದು ಶುಭ […]

ಹಾಸನ ಜೆಡಿಎಸ್ ಟಿಕೆಟ್‌ಗೆ ಜಿದ್ಧಾಜಿದ್ದಿ

ಹಾಸನ, ಜ.25- ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಸಮಾರಂಭ ಒಂದರಲ್ಲಿ ಹೇಳಿಕೊಂಡಿದ್ದಾರೆ. ತಾಲ್ಲೂಕಿನ ಕಕ್ಕೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಣ್ಣಪ್ಪ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಅವರು ಜೆಡಿಎಸ್‍ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ವಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ. ಜನರ ಪರಿಚಯ ಇದ್ದರೆ, ಊರಿನ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು […]

ಕೋಲಾರದಿಂದಲೇ ಕಣಕ್ಕಿಳಿಯಲು ಸಿದ್ದರಾಮಯ್ಯ ಪೂರ್ವ ತಯಾರಿ, ಮುನಿಯಪ್ಪ ಜೊತೆ ಮೀಟಿಂಗ್

ಬೆಂಗಳೂರು,ಜ.9- ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಕೆಲ ಕಾಂಗ್ರೆಸ್ ನಾಯಕರ ಜೊತೆ ಕೋಲಾರದ ಪ್ರಮುಖ ನಾಯಕ ಹಾಗೂ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ಎಂ.ಆರ್.ಸೀತಾರಾಂ, ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸ್ವಾಮಿ, ಮಾಜಿ ಸಂಸದರಾದ ನಾರಾಯಣಸ್ವಾಮಿ, ಚಂದ್ರಪ್ಪ ಹಾಗೂ ಮತ್ತಿತರರು ಜೊತೆಯಲ್ಲಿದ್ದರು. ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮವೊಂದರಲಿ ಭಾಗವಹಿಸುವ ಸಿದ್ದರಾಮಯ್ಯ […]

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸಿ.ಎಂ.ಇಬ್ರಾಹಿಂ ಸ್ಪರ್ಧೆ..?

ಬೆಂಗಳೂರು,ಜು.13- ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ. ಕೋಲಾರ ಪ್ರತಿನಿಧಿಸುತ್ತಿದ್ದ ಮಾಜಿ ಸಚಿವ ಶ್ರೀನಿವಾಸ್ ಗೌಡ ಅವರನ್ನು ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ಮೇಲೆ ಜೆಡಿಎಸ್‍ನಿಂದ ಉಚ್ಛಾಟಿಸಲಾಗಿದೆ. ಶ್ರೀನಿವಾಸ್ ಗೌಡ ಕೂಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ. ಹೀಗಾಗಿ ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಇಬ್ರಾಹಿಂ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ. […]