ಕಲ್ಯಾಣ ಕರ್ನಾಟಕದಲ್ಲಿ ವಲಸಿಗರಿಂದ ಕಾಂಗ್ರೆಸ್ ಘರ್ ವಾಪಾಸಿ ಅಭಿಯಾನ

ಬೆಂಗಳೂರು,ಮಾ.23- ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ಸೇರಿದ್ದ ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ನಾಯಕರು ಕಾಂಗ್ರೆಸ್‍ಗೆ ಘರ್ ವಾಪಾಸಿಯಾಗುತ್ತಿದ್ದಾರೆ. ಲೋಕಸಭೆ ಚುನಾವಣೆಯ ಆಜುಬಾಜಿನಲ್ಲಿ ಮಾಜಿ ಸಚಿವರಾದ ಎ.ಬಿ.ಮಾಲಕರೆಡ್ಡಿ, ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಣಸೂರ್, ಉಮೇಶ್ ಜಾದವ್ ಸೇರಿದಂತೆ ಕಲಬುರಗಿ ಹಾಗೂ ಯಾದಗಿರಿಯ ಬಹುತೇಕ ನಾಯಕರು ಬಿಜೆಪಿ ಸೇರಿದ್ದರು, ಇದರ ಪರಿಣಾಮ ಸೋಲಿಲ್ಲದ ಸರದಾರ ಎಂದು ಗುರುತಿಸಲ್ಪಟ್ಟಿದ್ದ ಮಲ್ಲಿಕಾರ್ಜುನ ಖರ್ಗೆ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಹಿನ್ನೆಡೆ ಅನುಭವಿಸಿದ್ದರು. ನಂತರ […]

ಚುನಾವಣಾ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ RSS ಮತ್ತಷ್ಟು ಸಕ್ರಿಯ

ಬೆಂಗಳೂರು, ಮಾ.17- ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಳೆದ ಕೆಲವು ತಿಂಗಳುಗಳಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘ ಕರ್ನಾಟಕದಲ್ಲಿ ತನ್ನ ಚಟುವಟಿಕೆಯನ್ನು ತೀವ್ರಗೊಳಿಸಿದೆ. ಇದು ರಾಜ್ಯದಲ್ಲಿ ಅದರ ವ್ಯಾಪ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಒಳಗೊಂಡಿದೆ. ವಿಶೇಷವಾಗಿ ಹಿಂದುತ್ವ ಶಕ್ತಿಗಳ ಬಲವರ್ಧನೆ ಇರುವ ಪ್ರದೇಶಗಳಲ್ಲಿ ಜೊತೆಗೆ ಸಮಾಜದ ವಿವಿಧ ವರ್ಗಗಳೊಂದಿಗೆ ಸಂಪರ್ಕ ಕಾಯ್ದುಕೊಳ್ಳುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆರ್‍ಎಸ್‍ಎಸ್‍ಗೆ ಕರ್ನಾಟಕ ದಕ್ಷಿಣದ ಸಾಂಸ್ಥಿಕ ವಲಯ ಎಂದು ಕರೆಯುವ ರಾಜ್ಯದ ದಕ್ಷಿಣ ಭಾಗವಾಗಿದೆ. ಇಲ್ಲಿ 355ಕ್ಕೂ ಹೆಚ್ಚು ಸಮರ್ಪಿತ ವಿಸ್ತಾರಕ್‍ಗಳು ಸಂಪರ್ಕ ಮತ್ತು ವಿಸ್ತರಣೆ ಕಾರ್ಯಕ್ರಮವನ್ನು […]

“ಬಿಎಸ್ವೈಗೆ ಕಣ್ಣೀರು ಹಾಕಿಸಿ ಅಧಿಕಾರ ಕಿತ್ತುಕೊಂಡು, ಈಗ ಕಾಲು ಹಿಡಿಯುತ್ತಿದ್ದಾರೆ”

ಬೆಂಗಳೂರು,ಮಾ.1- ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈ ಕಾಲು ಹಿಡಿಯುತ್ತಿರುವ ಬಿಜೆಪಿ, ಈ ಮೊದಲು ಅದೇ ಯಡಿಯೂರಪ್ಪರ ಕಣ್ಣಲ್ಲಿ ನೀರು ಹಾಕಿಸಿ, ಅಧಿಕಾರದಿಂದ ಇಳಿಸಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷರ ಮುಖ ತೋರಿಸಿದರೆ ನಾಲ್ಕು ಮತಗಳು ಸಿಗುವುದಿಲ್ಲ ಎಂಬ ವಾಸ್ತವ ಸಂಗತಿ ಅರಿವಾಗುತ್ತಲೇ ಯಡಿಯೂರಪ್ಪ ಅವರನ್ನು ಉತ್ಸವ ಮೂರ್ತಿ ಮಾಡಲು ಬಿಜೆಪಿ ಹೊರಟ್ಟಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಇದೇ ಬಿಜೆಪಿ ಹಿಂದೆ […]

ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರ ಗೆಲ್ಲಲು ಅಮಿತ್ ಶಾ ಸೂಚನೆ

ಬೆಂಗಳೂರು,ಫೆ.24- ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಧಾನಿ ಬೆಂಗಳೂರಿನ 28 ಕ್ಷೇತ್ರಗಳ ಪೈಕಿ ಕನಿಷ್ಟ 20 ಕ್ಷೇತ್ರಗಳಲ್ಲಿ ಬಿಜೆಪಿಯ ಕಮಲ ಅರಳಿಸುವಂತೆ ಕೇಂದ್ರ ಗೃಹಸಚಿವ ಅಮಿತ್ ಷಾ ರಾಜ್ಯ ಘಟಕದ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಗುಜರಾತ್ ಚುನಾವಣೆಯಲ್ಲಿ ಸ್ಥಳೀಯ ಮಟ್ಟದ ಚುನಾವಣಾ ತಂತ್ರಗಾರಿಕೆ ಭಾರೀ ಯಶಸ್ಸು ತಂದುಕೊಟ್ಟಿದ್ದು ಅದನ್ನು ಅಳವಡಿಸಿಕೊಳ್ಳಬೇಕು. ಪ್ರತಿ ವಾಡ್ರ್ನಲ್ಲಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಬೇಕು. 1+1 ಕ್ಷೇತ್ರದ ಜವಾಬ್ದಾರಿ ಹೊತ್ತುಕೊಂಡು ಪಕ್ಷವನ್ನು ಗೆಲ್ಲಿಸಬೇಕು. ಬೂತ್‍ಗಳಿಗೆ ಸಚಿವರು, ಶಾಸಕರು ಭೇಟಿ ನೀಡಬೇಕು. […]

ವಶಿಷ್ಠ ಸೌಹಾರ್ದ ಸಹಕಾರ ಸಂಘದ ಠೇವಣಿದಾರರಿಗೆ 26.97 ಕೋಟಿ ರೂ. ಠೇವಣಿ ಹಣ ಮರುಪಾವತಿ

ಸುವರ್ಣ ವಿಧಾನಸೌಧ ಬೆಳಗಾವಿ, ಡಿ.20 : ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರದ ಕುರಿತು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ. ವಿಶೇಷಾಧಿಕಾರಿಯ ಅವಧಿಯಲ್ಲಿ ಸಾಲ ವಸೂಲಾತಿಗೆ ಕ್ರಮವಹಿಸಿ 729 ಠೇವಣಿ ಖಾತೆಗಳನ್ನು ಮುಕ್ತಾಯಗೊಳಿಸಿ 26.97 ಕೋಟಿ ರೂ. ಠೇವಣಿ ಹಣವನ್ನು ಮರುಪಾವತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ವಿಧಾನಪರಿಷತ್ ಸದಸ್ಯರಾದ ಯು.ಬಿ‌.ವೆಂಕಟೇಶ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಪರಿಷತ್ ನಲ್ಲಿ ಉತ್ತರಿಸಿದ ಸಚಿವರು, ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ […]

BIG BREAKING : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು,ಡಿ.19- ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಮೊದಲ ಹಂತವಾಗಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಇಂದು ಘೋಷಣೆ ಮಾಡಿದರು. ಪಂಚರತ್ನ ಯಾತ್ರೆ ಕೈಗೊಂಡಿದ್ದ ಕುಮಾರಸ್ವಾಮಿ ಅವರು ಅಭ್ಯರ್ಥಿಗಳ ಹೆಸರನ್ನು ಘೋಷಿಸುವುದಾಗಿ ತಿಳಿಸಿದ್ದರು. ಅದರಂತೆ ಇಂದು 93ಕ್ಷೇತ್ರಗಳಿಗೆ ಈ ಕೆಳಕಂಡಂತೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಸಾವರ್ಕರ್ ಫೋಟೋಗೆ ನಮ್ಮ ಆಕ್ಷೇಪವಿಲ್ಲ : ಸಿದ್ದರಾಮಯ್ಯ ಚುನಾವಣೆ ಇನ್ನು ಆರು ತಿಂಗಳು ಇರುವಾಗಲೇ ಅಭ್ಯರ್ಥಿಗಳ ಹೆಸರನ್ನು […]