ಶೀಘ್ರ ಉತ್ತರ ಕರ್ನಾಟಕ ಸಂಘ-ಸಂಸ್ಥೆಗಳ ಸಭೆ : ಸಿಎಂ ಬೊಮ್ಮಾಯಿ
ಬೆಂಗಳೂರು, ಆ. 15-ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಬೆಂಗಳೂರು ನಗರದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರವೇ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ-ಸಂಸ್ಥೆಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿನ ದಾಸನಪುರ ಹೋಬಳಿಯ ಕಮ್ಮಸಂದ್ರದಲ್ಲಿ 3 ಎಕರೆ 24 ಗುಂಟೆ ಜಮೀನು ಮಂಜೂರು ಮಾಡಿರುವುದಕ್ಕೆ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘಸಂಸ್ಥೆಗಳ ಮಹಾಸಂಸ್ಥೆಯ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ […]