1.9 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದ ತಾಪಮಾನ, ಚಳಿಗೆ ದೆಹಲಿ ಗಢ ಗಢ

ನವದೆಹಲಿ,ಜ.8- ಚಳಿಗೆ ರಾಷ್ಟ್ರ ರಾಜಧಾನಿ ತತ್ತರಿಸಿ ಹೋಗಿದೆ. ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್ ಕುಸಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಏತನ್ಮಧ್ಯೆ, ದೆಹಲಿಯ ಹಲವು ನಗರಗಳಲ್ಲಿ ಕನಿಷ್ಠ 2.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಲೋ ರಸ್ತೆಯಲ್ಲಿ 2.8 ಡಿಗ್ರಿ ಸೆಲ್ಸಿಯಸ್ ಮತ್ತು ಪಾಲಂನಲ್ಲಿ 5.2 ಡಿಗ್ರಿ ಸೆಲ್ಸಿಯಸ್ ಇದೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ಜನ ತೀವ್ರ ಚಳಿಯಿಂದ […]