ಆಧುನಿಕ ಭಗೀರಥ ಕೆರೆ ಕಾಮೇಗೌಡ ಇನ್ನಿಲ್ಲ

ಮಳವಳ್ಳಿ,ಅ.17- ಕೆರೆಗಳನ್ನು ಸಂರಕ್ಷಣೆ ಮಾಡಿ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಆಧುನಿಕ ಭಗೀರಥ ಕೆರೆ ಕಾಮೇಗೌಡರು (86) ಇಂದು ಬೆಳಿಗ್ಗೆ ನಿಧನರಾದರು. ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ದಾಸನದೊಡ್ಡಿ, ಕುಂದೂರು ಬೆಟ್ಟ ಸುತ್ತ ಮುತ್ತಲಿನ ಅರಣ್ಯ ಪರಿಸರದಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿ, ಸಮರ್ಥವಾಗಿ ಸಂರಕ್ಷಣೆ ಮಾಡಿದ ಕಾಮೇಗೌಡರು ಸಮಾಜಕ್ಕೆ ಮತ್ತು ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿದ್ದರು. […]