ಯಲಹಂಕ ಬಳಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ

ಬೆಂಗಳೂರು, ಮಾ.4- ಯಲಹಂಕ ಬಳಿಯ ಜಾರಕಬಂಡೆ ಕಾವಲ್ ಪ್ರದೇಶದ 350 ಎಕರೆ ಸರ್ಕಾರಿ ಜಮೀನಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ ಅಭಿವೃದ್ಧಿಪಡಿಸಲಾಗುತ್ತದೆ. ಬೆಂಗಳೂರು ನಗರದಲ್ಲಿ ಗ್ರೀನ್ ಸ್ಪೇಸ್‍ಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಸರ್ಕಾರವು ಲಾಲ್‍ಬಾಗ್, ಕಬ್ಬನ್ ಪಾರ್ಕ್ ಮಾದರಿಯಲ್ಲಿ ವಿವಿಧೋದ್ದೇಶದ ಈ ಉದ್ಯಾನವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಹನಿ ನೀರಾವರಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ.90ರಷ್ಟು ಹಾಗೂ ಇತರರಿಗೆ ಶೇ.70ರಷ್ಟು ಸಹಾಯ ಧನವನ್ನು ಒದಗಿಸಲಾಗುವುದು.ತೋಟಗಾರಿಕೆಯಲ್ಲಿ ವಿನೂತನ […]