ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ಅಗತ್ಯ : ಸಿಎಂ ಬೊಮ್ಮಾಯಿ

ಬೆಂಗಳೂರು, ಜ.14- ಕ್ರೀಡಾಳುಗಳಿಗೆ ವೈಜ್ಞಾನಿಕ ವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್‍ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಮನ್‍ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿಂದು ಆನ್ ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ಅತ್ಯುತ್ತಮ ಕೋಚ್‍ಗಳ ಮೂಲಕ ಕ್ರೀಡಾಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು ಸರ್ಕಾರ ಅಗತ್ಯ ನೆರವು […]