ತನ್ವೀರ್ ಸೇಠ್ ನಿವೃತ್ತಿ ನಿರ್ಧಾರ : ಅಭಿಮಾನಿಗಳಿಂದ ಹೈಡ್ರಾಮಾ

ಮೈಸೂರು,ಫೆ.28- ರಾಜಕೀಯ ನಿವೃತ್ತಿ ಪಡೆಯಲು ನಿರ್ಧರಿಸಿದ ಶಾಸಕ ತನ್ವೀರ್ ಸೇಠ್ ಅವರ ನಿರ್ಧಾರ ವಿರೋಧಿಸಿ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. ರಾಜಕೀಯ ನಿವೃತ್ತಿ ಪಡೆಯಲು ನಿರ್ಧರಿಸಿದ ಶಾಸಕ ತನ್ವೀರ್ ಸೇಠ್ ಅವರ ಮೈಸೂರು ನಿವಾಸದ ಸಮೀಪ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ತನ್ವೀರ್ ಸೇಠ್ ನಿರ್ಧಾರಕ್ಕೆ ಬೇಸತ್ತ ಅಭಿಮಾನಿಗಳು ಮೈಸೂರಿನ ಉದಯಗಿರಿಯಲ್ಲಿರುವ ನಿವಾಸದ ಬಳಿ ಜಮಾಯಿಸಿದ್ದಾರೆ. ಈ ವೇಳೆ ಓರ್ವ ಅಭಿಮಾನಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮತ್ತೊಬ್ಬ ಅಭಿಮಾನಿ ತನ್ವೀರ್ ಸೇಠ್ […]
ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು,ಅ.18- ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದರು. ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದ ಬಳಿಕ ಕಡತಗಳನ್ನು ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಕಾರು ಚಾಲಕ ನೀಡಿದ್ದ ದೂರಿನ ಅನ್ವಯ ಪಳ್ನೀರ್ […]