ಮೇಕೆದಾಟು ಯೋಜನೆ, ಆ.10ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ನವದೆಹಲಿ,ಜು.26- ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ.ವಿಸ್ತೃತ ಯೋಜನಾ ವರದಿ(ಡಿಪಿಆರ್) ಕುರಿತಾಗಿ ಕಾವೇರಿ ಜಲ ನಿರ್ವಹಣಾ ಪ್ರಾಕಾರದಲ್ಲಿ ಯಾವುದೇ ರೀತಿಯ ಚರ್ಚೆ ನಡೆಸಬಾರದು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿತು. ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಸಿದಂತೆ ಕರ್ನಾಟಕ ಸರ್ಕಾರದ ಡಿಪಿಆರ್ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸದಂತೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ಮನ್ನಿಸಿ ಮುಂದಿನ ಅರ್ಜಿ ವಿಚಾರಣೆಯನ್ನು ಆ.10ಕ್ಕೆ ಮುಂದೂಡಿತು. […]