ಆ.11ರಿಂದ ‘ಹರ್ ಘರ್ ತಿರಂಗ’ ಅಭಿಯಾನ
ಬೆಂಗಳೂರು,ಜು.13- ದೇಶವು 75ನೇ ಅಜಾದಿ ಕಾ ಅಮೃತ್ ಮಹೋತ್ಸವ ಅಚರಣೆ ಮಾಡುತ್ತಿರುವ ಹಿನ್ನಲೆಯಲ್ಲಿ ದೇಶ ಭಕ್ತಿ ಬಿಂಬಿಸುವ ಹರ್ ಘರ್ ತಿರಂಗ ಅಭಿಯಾನವನ್ನು ಆ.11ರಿಂದ 17ರವರೆಗೆ ರಾಜ್ಯಾದ್ಯಂತ ನಡೆಸಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದ್ದು, ಅನೇಕರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು, ಇದರ ಸ್ಮರಣಾರ್ಥವಾಗಿ ಆ.11ರಿಂದ 17ರವರೆಗೆ ಪ್ರತಿ ಮನೆ ಮನೆಯಲ್ಲೂ ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಳ್ಳಬೇಕೆಂದು ಸೂಚಿಸಲಾಗಿದೆ. […]