ಅಗತ್ಯಬಿದ್ದರೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆ ; ಲೋಕಾಯುಕ್ತ

ಬೆಂಗಳೂರು,ಮಾ.3- ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಬಿದ್ದರೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಇಂದಿಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರ ಪುತ್ರರಾಗಿರುವ ಜಲಮಂಡಳಿ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರ ಕಚೇರಿ ಮತ್ತು ನಿವಾಸದ ಮೇಲೆ ನಮ್ಮ ಪೊಲೀಸರು ದಾಳಿ ನಡೆಸಿ ಇದುವರೆಗೂ 8.12 ಕೋಟಿ ರೂ.ನಗದು ವಶಪಡಿಸಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಇದುವರೆಗೂ 5 ಮಂದಿಯನ್ನು ವಶಕ್ಕೆ ಪಡೆದಿದ್ದು, ಅವರ ವಿರುದ್ಧ […]