ಬಿಜೆಪಿಯ ಬಿ ಟೀಮ್ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ : ಹೆಚ್ಡಿಕೆ

ಬೆಂಗಳೂರು, ಜ.23- ಬಿಜೆಪಿಯ ಬಿ ಟೀಮ್ ಯಾವ ಪಕ್ಷ ಎಂಬ ಬಹಿರಂಗ ಚರ್ಚೆಗೆ ನಾನು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ವಿಧಾನಸೌಧದ ಮುಂದೆಯೇ ಚರ್ಚೆ ನಡೆಯಲಿ. ನಿಮ್ಮ ಸಿದ್ದಪುರಷರ ಜತೆ ನೀವೂ ಬನ್ನಿ. ಸಮಯ, ದಿನಾಂಕ ನಾನು ನಿಗದಿ ಮಾಡಲಾ? ಅಥವಾ ನೀವು ಮಾಡುತ್ತೀರಾ? ಉತ್ತರಕ್ಕೆ ಕಾಯುತ್ತಿರುತ್ತೇನೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನುದ್ದೇಶಿಸಿ ಹೇಳಿದ್ದಾರೆ. […]