RSSನ ಪಠ್ಯೇತರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸಿಎಂಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಪತ್ರ

ಬೀದರ್. ಅ.11: ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ನಡೆಸುತ್ತಿರುವ ಪಠ್ಯೇತರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಮಂಗಳವಾರ ಪತ್ರ ಬರೆದಿರುವ ಅವರು, ನನ್ನ ವಿಧಾನಸಭಾ ಕ್ಷೇತ್ರದ ಕಮಠಾಣಾ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾಷ್ಟ್ರೀಯ […]