ಶಿವಮೊಗ್ಗ ಧಗಧಗ : ಹರ್ಷ ಪಾರ್ಥಿವ ಶರೀರ ಮೆರವಣಿಗೆ ವೇಳೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ
ಬೆಂಗಳೂರು, ಫೆ.21- ಶಿವಮೊಗ್ಗದಲ್ಲಿ ನಡೆದ ಹಿಂದೂಪರ ಕಾರ್ಯಕರ್ತ ಹರ್ಷ ಕೊಲೆ ಘಟನೆ ಹಿಂಸಾಚಾರಕ್ಕೆ ತಿರುಗಿದೆ. ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಹೊಟೇಲ್, ಕಟ್ಟಡಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಕಿಡಿಗೇಡಿಗಳು ಹಲವು ವಾಹನಗಳಿಗೆ ಬೆಂಕಿ ಇಟ್ಟಿದ್ದು ಮತ್ತೆ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಇಂದು ಬೆಳಗ್ಗೆ ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷ ನಿವಾಸವಿರುವ ಬಸವನಬೀದಿಗೆ ಮೃತ ದೇಹವನ್ನು ಮೆರವಣಿಗೆ ಮೂಲಕ ಕೊಂಡೊಯ್ಯುವಾಗ ಬಸ್ ನಿಲ್ದಾಣದ ಬಳಿ ಅಶೋಕ ವೃತ್ತದ ಹೊಟೇಲ್ […]