ಕೋಮು ಸಂಘರ್ಷದ ಪಾಠ ಮಾಡಿದ ಕಾಂಗ್ರೆಸ್‍ಗೆ ಸಿಎಂ ತಿರುಗೇಟು

ಬೆಂಗಳೂರು,ಫೆ.23- ಈ ಹಿಂದೆ ರಾಜ್ಯದ ನಾನಾ ಕಡೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಾಯೋಜಿತ ಕೋಮು ಸಂಘರ್ಷ ನಡೆಸಿದ ಅನುಭವದ ಆಧಾರದ ಮೇಲೆ ನಮಗೆ ನೀತಿ ಪಾಠ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗ ಗಲಭೆ ಸರ್ಕಾರಿ ಪ್ರಾಯೋಜಿತ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್‍ನವರು ಅಧಿಕಾರದಲ್ಲಿದ್ದಾಗ ಇದನ್ನೇ ಮಾಡಿರುವ ಅನುಭವದಲ್ಲಿ ಹೇಳುತ್ತಿದ್ದಾರೆ. ನಮಗೆ ಅವರಿಂದ ನೀತಿ ಪಾಠ ಬೇಕಾಗಿಲ್ಲ ಎಂದು ತಿರುಗೇಟು ನೀಡಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ […]