ನಮ್ಮದೇ ಸರ್ಕಾರವಿದ್ದರೂ ನಮ್ಮವರಿಗೆ ರಕ್ಷಣೆ ಇಲ್ಲ ; ಕೇಸರಿ ಪಾಳಯದಲ್ಲಿ ಅಸಮಾಧಾನ

000000000000ಬೆಂಗಳೂರು,ಫೆ.23- ಶಿವಮೊಗ್ಗದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿರುವುದಕ್ಕೆ ಸರ್ಕಾರದ ವಿರುದ್ಧವೇ ಬಿಜೆಪಿ ವಲಯದಲ್ಲಿ ಅಸಮಾಧಾನ ಎದ್ದಿದೆ. ನಮ್ಮದೇ ಸರ್ಕಾರವಿದ್ದರೂ ನಮ್ಮ ಸಂಘಟನೆಗಳ ಮೇಲೆ ದಾಳಿ ನಡೆಯುತ್ತಿದೆ ಎಂಬ ಪ್ರಶ್ನೆ ಮೂಡಿದೆ. ಪದಾಧಿಕಾರಿಗಳ ಸಭೆಯಲ್ಲಿಯೂ ಇದೇ ವಿಷಯ ಪ್ರಮುಖವಾಗಿ ಚರ್ಚೆಗೆ ಬಂದಿದ್ದು, ಕಠಿಣ ಕ್ರಮದ ಜೊತೆ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಲಾಗಿದೆ. ಆರ್‍ಎಸ್‍ಎಸ್‍ನ ಶಕ್ತಿ ಕೇಂದ್ರಗಳಲ್ಲಿ ಒಂದಾಗಿರುವ ಬಿಜೆಪಿ ಭದ್ರಕೋಟೆ ಶಿವಮೊಗ್ಗದಲ್ಲೇ ಬಜರಂಗದಳ ಕಾರ್ಯಕರ್ತನ ಹತ್ಯೆ ನಡೆದಿರುವುದಕ್ಕೆ ಬಿಜೆಪಿ ತೀವ್ರ […]