ಭಜರಂಗದಳ ಕಾರ್ಯಕರ್ತನ ಭೀಕರ ಹತ್ಯೆ, ಶಿವಮೊಗ್ಗ ಉದ್ವಿಗ್ನ, ಹೈಅಲರ್ಟ್ ಘೋಷಣೆ

ಶಿವಮೊಗ್ಗ,ಫೆ.21- ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನ ಭೀಕರ ಕೊಲೆಯಿಂದ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.ಮೊದಲೇ ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನನ್ನು ಕಳೆದ ರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಘಟನೆಯಿಂದ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಷಲಾಗಿದ್ದು, ಪರಿಸ್ಥಿತಿ ಮೀರದಂತೆ ಎಲ್ಲ ಕಡೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಶಿವಮೊಗ್ಗದವರೇ ಆದ ಗೃಹ ಸಚಿವ ಅರಗ […]