23ರಿಂದ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಗುರು ಸಂಸ್ಮರಣೋತ್ಸವ

ಬೆಂಗಳೂರು,ಸೆ.17- ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಗುರು ಸಂಸ್ಮರಣೋತ್ಸವ ಮತ್ತು ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯಮಟ್ಟದ 43ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳವನ್ನು ಇದೇ 23ರಿಂದ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಶ್ರೀ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮಗಳು ಆರಂಭವಾಗಲಿವೆ. ಬೆಳಗ್ಗೆ 43ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳ ಉದ್ಘಾಟನೆ ಮತ್ತು ಚುಂಚಶ್ರೀ […]