ಜು.18ರಂದು ರಾಷ್ಟ್ರಪತಿ ಚುನಾವಣೆ, ಸ್ಟ್ರಾಂಗ್‍ರೂಂ ತಲುಪಿದ ಬ್ಯಾಲೆಟ್ ಬಾಕ್ಸ್

ಬೆಂಗಳೂರು,ಜು.13- ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಅವಶ್ಯಕ ಸಾಮಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ದೆಹಲಿಯ ಭಾರತ ಚುನಾವಣಾ ಆಯೋಗದ ಕೇಂದ್ರ ಕಚೇರಿಯಿಂದ ವಿಧಾನಸೌಧಕ್ಕೆ ತಲುಪಿದ್ದು, ಸ್ಟ್ರಾಂಗ್‍ರೂಂನಲ್ಲಿ ಭದ್ರವಾಗಿವೆ. ರಾಜ್ಯದ ಬ್ಯಾಲೆಟ್ ಜರ್ನಿಯ ನೇತೃತ್ವವನ್ನು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ವಹಿಸಿದ್ದು, ನಿನ್ನೆ ಸಂಜೆ ದೆಹಲಿಯಿಂದ ನಿರ್ಗಮಿಸಿ ರಾತ್ರಿ 8.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿತು. ವಿಶೇಷ ಬ್ಯಾಲೆಟ್ ಜರ್ನಿಯ ಮುಖಾಂತರ ರಾಜ್ಯಕ್ಕೆ ಆಗಮಿಸಿದ ಮತದಾನದ ಸಾಮಗ್ರಿಗಳು ರಾತ್ರಿ 9 ಗಂಟೆಗೆ ವಿಧಾನಸೌಧ ತಲುಪಿವೆ. ರಾಜ್ಯ […]